ಮತ್ತೆ ಗಗನಕ್ಕೇರುವತ್ತ ಟೊಮ್ಯಾಟೋ ಬೆಲೆ |

July 29, 2024
1:17 PM

ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.

Advertisement

ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ‌ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ  ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group