ಕಳೆದ ವರ್ಷ ಟೊಮೇಟೊ ಬೆಲೆ(Tomato price) ಸಾಕಷ್ಟು ಏರಿಕೆಯಾಗಿ ಟೊಮೆಟೊ ರೈತರು ಉತ್ತಮ ಆದಾಯ ಗಳಿಸಿದ್ದರು, ಕೆಲ ರೈತರಂತು ಲಕ್ಷಾಧಿಪತಿಗಳಾಗಿದ್ದರು. ಆ ವೇಳೆ ಟೊಮೇಟೊ ಕಳ್ಳತನದ ಘಟನೆಗಳೂ ನಡೆದಿದ್ದವು. ಸದ್ಯಕ್ಕೆ ಮತ್ತೆ ಅಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಏಕೆಂದರೆ ಟೊಮೆಟೊ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ.
ಕೋಲಾರ ಎಪಿಎಂಸಿ ಟೊಮೆಟೊ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ 15 ಕೆಜಿ ತೂಕದ ಒಂದು ಬಾಕ್ಸ್ ಟೊಮೆಟೊ ಬೆಲೆ 1000 ಗಡಿ ದಾಟಿತ್ತು. ಆದರೆ ಮೊನ್ನೆಯಿಂದ 15 ಕೆಜಿ ತೂಕದ ಒಂದು ಬಾಕ್ಸ್ ಬೆಲೆ 500 ರೂಪಾಯಿಗೆ ಕುಸಿತಗೊಂಡಿದ್ದು ರೈತರಿಗೆ ಭಾರೀ ನಿರಾಸೆ ಉಂಟಾಗಿತ್ತು. ಇದೀಗ ಟೊಮೊಟೊ ಬೆಲೆಯಲ್ಲಿ ಮತ್ತೆ ಚೇತರಿಕೆ ಕಂಡಿದ್ದು, ಗರಿಷ್ಠ 600 ರೂಪಾಯಿ ವರೆಗೆ ಟೊಮೆಟೊ ಮಾರಾಟವಾಗುತ್ತಿದೆ. ಇನ್ನು ಒಂದು ವಾರದ ಕಾಲ ಇದೇ ಬೆಲೆ ಮುಂದುವರೆಯಲಿದ್ದು ಮತ್ತೆ ಬೆಲೆ ಏರಿಕೆ ಆಗುವ ಸಾಧ್ಯತೆಗಳಿದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಮಳೆಯ ಕಾರಣದಿಂದ ತರಕಾರಿ ಬೆಳೆಯ ಮೇಲೆ ಹೊಡೆತ ಬಿದ್ದಿದೆ, ಹೀಗಾಗಿ ಟೊಮೇಟೊ ಹೊರತಾಗಿ ಎಲ್ಲ ಬಗೆಯ ತರಕಾರಿಗಳ ಬೆಲೆಯೂ ಏರಿಕೆಯಾಗಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ ಗಢ, ದೆಹಲಿ, ಜಾರ್ಖಂಡ್ ಮತ್ತಿತರ ರಾಜ್ಯಗಳಿಗೆ ಟೊಮೇಟೊ ರಫ್ತು ಮಾಡಲಾಗುತ್ತಿದೆ. ರಫ್ತು ಮಾಡುವ ರಾಜ್ಯಗಳಲ್ಲಿ ಟೊಮೇಟೊ ಇಳುವರಿ ಕಡಿಮೆಯಾದ್ದರಿಂದ ಇಲ್ಲಿ ಟೊಮೇಟೊಗೆ ಬೇಡಿಕೆ ಬಂದಿದೆ ಎಂದು ತಜ್ಞರು ತಿಳಿಸಿದ್ದಾರೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…