ದಕ್ಷಿಣ ಭಾರತದಲ್ಲಿ ರಣ ಭೀಕರ ಮಳೆ | ಉತ್ತರ ಕಾಶ್ಮೀರದಲ್ಲಿ ಬಿಸಿಲಿನ ಹೊಡೆತ | ಶಾಲೆಗಳಿಗೆ ರಜೆ ಘೋಷಣೆ, ಮಳೆಗಾಗಿ ಪ್ರಾರ್ಥನೆ

July 30, 2024
1:01 PM

ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ  ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್​, ಏರ್​ ಕೂಲರ್​, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.

Advertisement
ಇದು ಸಾಮಾನ್ಯ ದಿನಕ್ಕಿಂತ 6.0 ಡಿಗ್ರಿ ಹೆಚ್ಚಾಗಿದೆ. ಜುಲೈ 21, 1988 ರಂದು ದಾಖಲಾದ ಅತ್ಯಧಿಕ ಕನಿಷ್ಠ ತಾಪಮಾನವು 25.2 ಡಿಗ್ರಿ ಸೆಲ್ಸಿಯಸ್ ಆಗಿದೆ. ಕಾಶ್ಮೀರ ಕಣಿವೆಯಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಶಾಖ ಹೆಚ್ಚಾಗುತ್ತಿರುವ ಹಿನ್ನೆಲೆ ಜುಲೈ 29 ಮತ್ತು 30 ರಂದು ಪ್ರಾಥಮಿಕ ಹಂತದ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ವಿಭಾಗೀಯ ಆಯುಕ್ತ ವಿ ಕೆ ಬಿಧುರಿ ಆದೇಶ ಹೊರಡಿಸಿದ್ದಾರೆ.
ಋತುಮಾನದ ಸರಾಸರಿಗಿಂತ 6 ಡಿಗ್ರಿ ಸೆಲ್ಸಿಯಸ್​​​​​​ ಹೆಚ್ಚು: ಭಾನುವಾರ ಮತ್ತು ಸೋಮವಾರದ ಮಧ್ಯರಾತ್ರಿ ಶ್ರೀನಗರಲ್ಲಿ ಕನಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಋತುಮಾನದ ಸರಾಸರಿಗಿಂತ ಸುಮಾರು 6.0 ಡಿಗ್ರಿ ಡಿಗ್ರಿಗಳಷ್ಟು ಹೆಚ್ಚಾಗಿದೆ. ಈ ತಾಪಮಾನವು ಜುಲೈ 26, 2021 ರಂದು ದಾಖಲಾದ ಎರಡನೇ ಅತಿ ಹೆಚ್ಚು ಕನಿಷ್ಠ ತಾಪಮಾನಕ್ಕೆ ಸರಿಸಮಾನವಾಗಿದೆ. ಜುಲೈ 21, 1988 ರಂದು ದಾಖಲಿಸಲಾದ ಅತ್ಯಧಿಕ ಕನಿಷ್ಠ ತಾಪಮಾನವು 25.2 ಡಿಗ್ರಿ ಸೆಲ್ಸಿಯಸ್ ಆಗಿದೆ. ತಣ್ಣನೆಯ ಕಾಶ್ಮೀರದದಲ್ಲಿ ಸೂರ್ಯನ ಶಾಖದಿಂದ ಜನರು ಬೇಸತ್ತು ಹೋಗಿದ್ದಾರೆ. ಹಲವರು ಏರ್ ಕೂಲರ್‌ಗಳ ಮೊರೆ ಹೋಗುತ್ತಿದ್ದಾರೆ ಎಂದು ಸ್ವತಂತ್ರ ಹವಾಮಾನ ಮುನ್ಸೂಚಕ ಫೈಜಾನ್ ಆರಿಫ್ ಮಾಹಿತಿ ನೀಡಿದ್ದಾರೆ. ಜನರು ಫ್ಯಾನ್​, ಏರ್​ ಕೂಲರ್​ ಮೊರೆ ಹೋಗಿದ್ದರಿಂದ ಹವಾನಿಯಂತ್ರಿತ (ಎಸಿ) ಗಳಿಗೆ ಬೇಡಿಕೆ ಹೆಚ್ಚಾಗಿದೆ. ಶ್ರೀನಗರದ ಓಲ್ಡ್ ಸಿಟಿಯಲ್ಲಿ ಇವುಗಳ ಮಾರಾಟದ ಪ್ರಮಾಣದಲ್ಲಿ ಹೆಚ್ಚಾಗಿದೆ.

ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.

ಬಿಸಿಲು ಹೆಚ್ಚಾಗಿದ್ದರಿಂದ ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಜನರು, ಮಳೆಗಾಗಿ ದೇವರ ಮೊರೆ ಹೋಗಿದ್ದಾರೆ. ಬಿಸಿಲು ಮಕ್ಕಳ ಮೇಲೂ ಪರಿಣಾಮ ಬೀರಬಹುದು ಎಂಬ ಕಾರಣದಿಂದ ಕಾಶ್ಮೀರ ವಿಭಾಗೀಯ ಆಡಳಿತವು ಜು. 29 ಮತ್ತು 30 ರಂದು ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಪ್ರಾಥಮಿಕ ಹಂತದವರೆಗಿನ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿದೆ. ಆದರೆ, ಶಿಕ್ಷಕರು, ಸಿಬ್ಬಂದಿ ಸೇರಿದಂತೆ ಇತರರು ಕೆ ಕರ್ತವ್ಯಕ್ಕೆ ಹಾಜರಾಗುವಂತೆ ವಿಭಾಗೀಯ ಆಯುಕ್ತ ವಿ ಕೆ ಬಿಧುರಿ ಅಧಿಕೃತ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ಮಳೆ ಸುರಿದಿದ್ದು, ಬಿಸಿಲು ಬೇಗೆಯಿಂದ ತತ್ತರಿಸಿದ್ದ ಜನರು ನಿರಾಳರಾಗಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ
May 10, 2025
12:20 PM
by: ಸಾಯಿಶೇಖರ್ ಕರಿಕಳ
ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!
May 10, 2025
8:07 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ
May 9, 2025
8:00 PM
by: The Rural Mirror ಸುದ್ದಿಜಾಲ
ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ
May 9, 2025
7:49 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group