ಭಾರತದ ದಕ್ಷಿಣ ರಾಜ್ಯಗಳಾದ ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಮಳೆಯ ಅಬ್ಬರಕ್ಕೆ ಜನ ಜೀವನ ಹೈರಾಣಾಗಿದೆ. ಆದರೆ ಅತ್ತ ಕಾಶ್ಮೀರ ಕಣಿವೆಯ ಜನತೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದೆದಾರೆ. ಜಮ್ಮು ಮತ್ತು ಕಾಶ್ಮೀರದ ಬೇಸಿಗೆ ರಾಜಧಾನಿ ಶ್ರೀನಗರದಲ್ಲಿ ಕಳೆದ ರಾತ್ರಿ ಗರಿಷ್ಠ 24.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಮಕ್ಕಳು, ಮಹಿಳೆಯರು, ವಯೋವೃದ್ಧರು ಬಿಸಿಲು ಮತ್ತು ಬಿಸಿ ಗಾಳಿಯಿಂದ ತತ್ತರಿಸಿದ್ದಾರೆ. ಬಿಸಿಲಿನ ಹೊಡೆತದಿಂದ ಹೊರಬರಲು ಫ್ಯಾನ್, ಏರ್ ಕೂಲರ್, ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಎರಡು ದಿನಗಳ ಕಾಲ ಶಾಲೆಗಳಿಗೂ ಕೂಡ ರಜೆ ಘೋಷಿಸಲಾಗಿದೆ.
ತಾಪಮಾನ ಇಳಿಕೆ ಮುನ್ಸೂಚನೆ: ಸೋಮವಾರದಿಂದ ಜಮ್ಮು ಮತ್ತು ಕಾಶ್ಮೀರದಾದ್ಯಂತ ತಾಪಮಾನದಲ್ಲಿ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಗರದಲ್ಲಿ ಭಾನುವಾರದಂದು ಅತಿ ಹೆಚ್ಚು ಮತ್ತು ಮೂರನೇ ಸಾರ್ವಕಾಲಿಕ ಗರಿಷ್ಠ 36.2 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ಜುಲೈ 10, 1946 ರಂದು ಶ್ರೀನಗರದಲ್ಲಿ ಸಾರ್ವಕಾಲಿಕ ಗರಿಷ್ಠ 38.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದರೆ, ಜುಲೈ 9, 1999 ರಂದು 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಅಧಿಕಾರಿಗಳು ತಿಳಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…