ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಕಾಮಗಾರಿಗಳಲ್ಲಿ ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯೂ ಒಂದಾಗಿರುವ ಕಾರಣ, ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶ ನಿರ್ಬಂಧವನ್ನು ವಿಸ್ತರಿಸಲಾಗಿದೆ.
ಜೋಗ ಜಲಪಾತದ ಮುಖ್ಯದ್ವಾರದ ಕಾಮಗಾರಿಯು ಕಾಲ ಮಿತಿಯೊಳಗೆ ಪೂರ್ಣಗೊಳಿಸಬೇಕಿದ್ದು, ಕಾಮಗಾರಿ ಅನುಷ್ಠಾನದ ಸಮಯದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಯಾವುದೇ ರೀತಿಯ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ ಜೋಗ ಜಲಪಾತದ ಪ್ರವೇಶ ದ್ವಾರವನ್ನು ಜನವರಿ 1 ರಿಂದ ಮಾರ್ಚ್ 15 ರವರೆಗೆ ಮುಚ್ಚಲಾಗಿತ್ತು. ಆದರೆ ಇದರುವರೆಗೂ ಜೋಗ ಜಲಪಾತದ ಮುಖ್ಯ ದ್ವಾರದ ಕಾಮಗಾರಿಯು ಪೂರ್ಣಗೊಳ್ಳದೇ ಇರುವುದರಿಂದ ಏಪ್ರಿಲ್ 30 ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಜೋಗ ಜಲಪಾತಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮತ್ತು ಜೋಗ ನಿರ್ವಹಣಾ ಪ್ರಾಧಿಕಾರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…