MIRROR FOCUS

ಪ್ರವಾಸಿಗರ ಸ್ವರ್ಗ ಮುಳ್ಳಯ್ಯನಗಿರಿ ಗುಡ್ಡಕ್ಕೆ ಬೆಂಕಿ | ಕಾಡ್ಗಿಚ್ಚಿಗೆ ನೂರಾರು ಎಕರೆ ಅರಣ್ಯ ಭಸ್ಮ | ಬೆಂಕಿ ನಂದಿಸಲು ಹರಸಾಹಸಪಟ್ಟ ಅಗ್ನಿಶಾಮಕ ಸಿಬ್ಬಂದಿ

Share

ಬೇಸಿಗೆಯ ಉರಿ ಬಿಸಿಲಿನ ತಾಪ ಏರುತ್ತಿದ್ದಂತೆ ಮೊದಲು ಸಮಸ್ಯೆ ಉಂಟಾಗೋದು ಅರಣ್ಯ ಪ್ರದೇಶಗಳಿಗೆ(Forest). ಈ ಸಮಯದಲ್ಲಿ ಕಾಡು ಪ್ರಾಣಿಗಳ(Animals) ಘರ್ಷಣೆಯಿಂದಲೂ ಅಥವಾ ಕಿಡಿಗೇಡಿಗಳು ಹಾಕಿವ ಬೆಂಕಿಯಿಂದಲೂ(Fire) ಕಾಡಿಗೆ ಬೆಂಕಿ ಹೊತ್ತಿಕೊಳ್ಳುತ್ತದೆ. ಇದರಿಂದ ಅಪಾರ ಪ್ರಮಾಣದ ಕಾಡು ಸಂಪತ್ತು, ಪ್ರಾಣಿ, ಪಕ್ಷಿಗಳು ನಾಶವಾಗುತ್ತವೆ. ಇದೀಗ ರಾಜ್ಯದ ಅತ್ಯಂತ ಎತ್ತರದ ಪ್ರದೇಶ ಹಾಗೂ ದೇಶ-ವಿದೇಶಿಗರ ನೆಚ್ಚಿನ ಪ್ರವಾಸಿ ತಾಣವು(Tourism) ಆಗಿರುವ ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಬೆಟ್ಟದಲ್ಲಿ (Mullayanagiri Peak) ಕಾಡ್ಗಿಚ್ಚು ಹಬ್ಬಿದ್ದು, ಬೆಂಕಿಯ ಕೆನ್ನಾಲಿಗೆಗೆ ನೂರಾರು ಎಕರೆ ಅರಣ್ಯ ಸಂಪೂರ್ಣ ಸುಟ್ಟು ಕರಕಲಾಗಿದೆ.

Advertisement

ಎತ್ತರ ಹಾಗೂ ಇಳಿಜಾರಿನ ಬೆಟ್ಟಕ್ಕೆ ಬೆಂಕಿ ವ್ಯಾಪಿಸಿರುವುದರಿಂದ ಕೆಲ ಸ್ಥಳಕ್ಕೆ ಹೋಗಲು ಅರಣ್ಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗೂ ಸಾಧ್ಯವಾಗುತ್ತಿಲ್ಲ. ಆದರೂ, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಮುಳ್ಳಯ್ಯನಗಿರಿ ತಪ್ಪಲು ಎಂದರೇನೆ ಅಪರೂಪದ ಸಸ್ಯ ಸಂಪತ್ತಿನ ರಾಶಿ. ಬಿಸಿಲಿನ ಝಳಕ್ಕೆ ಬೆಂಕಿಯ ಕೆನ್ನಾಲಿಗೆ ಹೆಚ್ಚಿದ ಪರಿಣಾಮ ನೂರಾರು ಎಕರೆ ಅಪರೂಪದ ಸಸ್ಯರಾಶಿ ಕೂಡ ಸುಟ್ಟು ಭಸ್ಮವಾಗಿದೆ.

ಸ್ಥಳಕ್ಕೆ ಭೇಟಿ ನೀಡಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಅರಣ್ಯ ಇಲಾಖೆ, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ ಜೊತೆ ಸ್ಥಳೀಯರು ಕೂಡ ಬೆಂಕಿ ನಂದಿಸಲು ಕೈಜೋಡಿಸಿದ್ದಾರೆ. ಆದರೆ, ಭಾರೀ ಗಾಳಿಗೆ ಬೆಂಕಿಯ ಜ್ವಾಲೆ ಹರಡುತ್ತಲೇ ಇದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹೋರಾಡುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ನೂರಾರು ಪ್ರವಾಸಿಗರು ಕೂಡ ಮುಳ್ಳಯ್ಯನಗಿರಿಗೆ ಭೇಟಿ ನೀಡಿದ್ದಾರೆ. ಮುಳ್ಳಯ್ಯನಗಿರಿ ಮಾರ್ಗದಲ್ಲೇ ಬೆಂಕಿ ಹೊತ್ತಿರುವುದರಿಂದ ರಸ್ತೆ ಬದಿಯಲ್ಲೂ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಪ್ರವಾಸಿಗರು ಮುಳ್ಳಯ್ಯನಗಿರಿಯಿಂದ ಚಿಕ್ಕಮಗಳೂರಿಗೆ ಬರಲು ಸಾಧ್ಯವಾಗದೇ ಮುಳ್ಳಯ್ಯನಗಿರಿ ಮಾರ್ಗದಲ್ಲೇ ಜಾಮ್ ಆಗಿದ್ದಾರೆ.

ಅರಣ್ಯ ಅಧಿಕಾರಿಗಳು ಬೆಂಕಿಯ ಜ್ವಾಲೆ ಸ್ವಲ್ಪ ಕಡಿಮೆಯಾದ ಬಳಿಕ ಕಳುಹಿಸುತ್ತೇವೆ ಎಂದು ಹೇಳಿ ಅಲ್ಲೇ ಉಳಿಸಿಕೊಂಡಿದ್ದಾರೆ. ಆದರೆ, ಬೆಂಕಿಯಿಂದ ಪ್ರವಾಸಿಗರು ಸೇರಿದಂತೆ ಯಾರಿಗೂ ತೊಂದರೆಯಾಗಿಲ್ಲ. ಅಗ್ನಿಶಾಮಕ ಸಿಬ್ಬಂದಿ ರಸ್ತೆಯಲ್ಲಿ ನಿಂತು ಮುಗಿಲೆತ್ತರಕ್ಕೆ ನೀರು ಚಿಮ್ಮಿಸುವ ಮೂಲಕ ಇಳಿಜಾರಿನ ಗುಡ್ಡದ ಬೆಂಕಿಯನ್ನು ನಂದಿಸಿದ್ದಾರೆ. ಬಿಸಿಲ ಧಗೆಗೆ ಅರಣ್ಯ ಸಂಪೂರ್ಣ ಒಣಗಿ ನಿಂತಿರುವುದರಿಂದ ನೋಡ-ನೋಡುತ್ತಿದ್ದಂತೆ ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದ್ದು, ಪ್ರಾಣಿ-ಪಕ್ಷಿಗಳು ಕೂಡ ಜೀವ ತೆತ್ತಿದ್ದಾವೆ.

– ಅಂತರ್ಜಾಲ ಮಾಹಿತಿ

A forest fire has broken out in the Mullayanagiri Peak of the Chandradrona range of Taluk, which is the highest area of ​​the state and a favorite tourist destination for both domestic and foreign tourists.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-04-2025 | ಕೆಲವು ಕಡೆ ಗುಡುಗು ಸಹಿತ ಮಳೆ ಸಾಧ್ಯತೆ | ಮುಂದಿನ 10 ದಿನಗಳವರೆಗೂ ಮಳೆ ಅಲ್ಲಲ್ಲಿ ಮಳೆಯ ಸಾಧ್ಯತೆ

ಅಲ್ಲಲ್ಲಿ ಗುಡುಗು ಸಹಿತ ಸಂಜೆ, ರಾತ್ರಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮುಂದಿನ…

5 hours ago

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

9 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

10 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

11 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

11 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

11 hours ago