ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

May 27, 2025
10:57 PM

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ.  ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು  ಪ್ರವಾಸಿಗರು/ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಿರಲು ಸೂಚಿಸಿರುತ್ತದೆ.  ಹಾಗಾಗಿ ಹೋಟೆಲ್/ರೆಸಾರ್ಟ್ /ಹೋಂ ಸ್ಟೇಗಳಲ್ಲಿ ತಂಗುವ ಪ್ರವಾಸಿಗರಿಗೆ ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ತಿಳಿಸಿ ಮುಂಜಾಗ್ರತಾ ಕ್ರಮವಹಿಸಲು ಹೋಟೆಲ್/ರೆಸಾರ್ಟ್ /ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ನಿರ್ಲಕ್ಷಿಸಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶತ್ರುಗಳಿಂದ ಈ ರಾಶಿಯವರಿಗೆ ಜೀವಕ್ಕೆ ಅಪಾಯವಿದೆ..?
July 13, 2025
7:40 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror