ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರವಾಸಿಗರು/ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಿರಲು ಸೂಚಿಸಿರುತ್ತದೆ. ಹಾಗಾಗಿ ಹೋಟೆಲ್/ರೆಸಾರ್ಟ್ /ಹೋಂ ಸ್ಟೇಗಳಲ್ಲಿ ತಂಗುವ ಪ್ರವಾಸಿಗರಿಗೆ ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ತಿಳಿಸಿ ಮುಂಜಾಗ್ರತಾ ಕ್ರಮವಹಿಸಲು ಹೋಟೆಲ್/ರೆಸಾರ್ಟ್ /ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ನಿರ್ಲಕ್ಷಿಸಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಯೂರ.ಕೆ, 7ನೇ ತರಗತಿ, ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರ ಚೊಕ್ಕಾಡಿ | -…
ಜುಲೈ 9 ರಂದು ಭಾರತ್ ಬಂದ್‌ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿವೆ. ದೇಶವ್ಯಾಪಿ…
ಮಗು ಗರ್ಭದಲ್ಲಿದ್ದಾಗಲೇ ಕೆಲವು ಘಟನೆಗಳಿಗೆ ಪ್ರತಿಕ್ರಿಯಿಸುವ ಬಗ್ಗೆ ಕೆಲವು ವೈಜ್ಞಾನಿಕ ಅಧ್ಯಯನಗಳು ಹೇಳಿವೆ.…
ಶಿಕ್ಷಣ ಸಂಸ್ಥೆಗಳಲ್ಲಿ ಹಾಸ್ಟೆಲ್ ವ್ಯವಸ್ಥೆ ಸರ್ವೇ ಸಾಮಾನ್ಯ. ಹೀಗೆ ಹಾಸ್ಟೆಲ್ ಇದೆ ಅಂದ…
ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ…
ಹಕ್ಕಿಗಳಿಗೆ ಗೂಡುಕಟ್ಟುವ ಮೂಲಕ ಪರಿಸರ ಸಂರಕ್ಷಣೆಗೆ ಪಣತೊಟ್ಟಿರುವ ದಂಪತಿಗಳು ಬಂಟ್ವಾಳ ತಾಲೂಕಿನಲ್ಲಿದ್ದಾರೆ. ಇವರ…