Advertisement
MIRROR FOCUS

ಎಳೆ ಅಡಿಕೆ ದಾಸ್ತಾನು | ಇಬ್ಬರ ಜೀವಕ್ಕೆ ಕುತ್ತು ತಂದ ವಿಷಕಾರಿ ಅನಿಲ |

Share

ಅಡಿಕೆ ದಾಸ್ತಾನು ಮಾಡಿರುವ ಟ್ಯಾಂಕ್‌ಗೆ ಇಳಿದು ಸ್ವಚ್ಛ ಮಾಡುತ್ತಿರುವಾಗ ವಿಷಕಾರಿ ಅನಿಲ ಸೇವಿಸಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ.ಅತಿಯಾದ ಮೀಥೇನ್ ಅನಿಲವು ಟ್ಯಾಂಕ್‌ನಲ್ಲಿ ತುಂಬಿ, ಆಮ್ಲಜನಕದ ಕೊರತೆಯನ್ನು ಉಂಟುಮಾಡಿತು ಎಂದು ವರದಿಯಾಗಿದೆ.

ಈ ಘಟನೆ ಬಾಂಗ್ಲಾದೇಶದಲ್ಲಿ ನಡೆದಿದೆ. ಅಡಿಕೆ ಕಟಾವು ಮಾಡಿದ ಬಳಿಕ
ದಾಸ್ತಾನು ಮಾಡಿ ಸಂಸ್ಕರಣೆಯ ನಂತರ ಬಾಂಗ್ಲಾದೇಶದಲ್ಲಿ ಅಡಿಕೆ ಮಾರಾಟ ಮಾಡಲಾಗುತ್ತದೆ. ಹೀಗೆ ದಾಸ್ತಾನು ಮಾಡಿರುವ ಅಡಿಕೆಯ ಟ್ಯಾಂಕ್‌ಗೆ ಇಳಿದ ಕಾರ್ಮಿಕರು ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಒಂದು ದಿನದ ಹಿಂದೆ ಟ್ಯಾಂಕ್‌ನಲ್ಲಿ ಅಡಿಕೆ ದಾಸ್ತಾನು ಮಾಡಲಾಗಿತ್ತು, ಮರುದಿನ ಇನ್ನೊಂದು ಟ್ಯಾಂಕ್‌ ಸ್ವಚ್ಛಗೊಳಿಸಿ ಅಡಿಕೆ ತುಂಬಿದ್ದ ಟ್ಯಾಂಕ್‌ ತೆರೆಯುತ್ತಿದ್ದಾಗ ಪ್ರಜ್ಞೆ ತಪ್ಪಿ ಬಿದ್ದರು ಎಂದು ವರದಿಯಾಗಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಉಳಿದ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸುಮಾರು ಎಂಟು ಅಡಿ ಆಳದ ತೊಟ್ಟಿಯಲ್ಲಿ ಅಡಿಕೆ ಶೇಖರಣೆಯಾಗಿದ್ದು, ಅಡಿಕೆಯನ್ನು ಹೊರತೆಗೆಯಲು ಮುಂದಾದಾಗ ಅವಘಡ ಸಂಭವಿಸಿದೆ.ಅಡಿಕೆ ಕೊಳೆತ ತೊಟ್ಟಿಯಲ್ಲಿ ಅತಿಯಾದ ಮೀಥೇನ್ ಅನಿಲವನ್ನು ಉತ್ಪತ್ತಿಯಾಗುತ್ತದೆ. ಇದು ಆಮ್ಲಜನಕದ ಕೊರತೆಗೆ ಕಾರಣವಾಗುತ್ತದೆ. ಇದರಿಂದಾಗಿ ಅಸ್ವಸ್ಥತೆ ಉಂಟಾಗುತ್ತದೆ. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

2 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

4 hours ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

4 hours ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

5 hours ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

18 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

1 day ago