Advertisement
MIRROR FOCUS

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

Share

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು ವಿಭಾಗಗಳಲ್ಲಿ ಅವಕಾಶ ಮಾಡಿಕೊಡಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಗಿರಿಮಾರ್ಗದಲ್ಲಿ ಕಳೆದ ಆರು ತಿಂಗಳಲ್ಲಿ ಎರಡೂವರೆ ಲಕ್ಷದಷ್ಟು ವಾಹನಗಳ ಸಂಚಾರ ಕಂಡುಬಂದಿದೆ. ಗಿರಿ ರಸ್ತೆ ಅತ್ಯಂತ ಕಿರಿದಾಗಿರುವುದರಿಂದ ಸಮಸ್ಯೆಯಾಗುತ್ತಿದ್ದು, ಭೂಗರ್ಭ ಶಾಸ್ತ್ರಜ್ಞರು ಭೂಕುಸಿತದ ಬಗ್ಗೆ ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಿಗ್ಗೆ6 ಗಂಟೆಯಿಂದ ಮಧ್ಯಾಹ್ನ 12 ರವರೆಗೆ 600 ವಾಹನಗಳನ್ನು ಹಾಗೂ ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆವರೆಗೆ 600 ವಾಹನಗಳನ್ನು ಬಿಡಲು ನಿರ್ಧರಿಸಲಾಗಿದೆ. ಮಧ್ಯಾಹ್ನ ಬಿಡುವು ನೀಡಲಾಗುವ ಒಂದು ಗಂಟೆ ಅವಧಿಯಲ್ಲಿ ಗಿರಿಗೆ ತೆರಳುವ ವಾಹನಗಳು ಮರಳಿ ಬರಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

42 minutes ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

9 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago