ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್ ಫೌಂಡೇಶನ್ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡಿರುವ ಜೀವನದಿ ಕಾವೇರಿ ಎಂಬ ಸಾಕ್ಷ್ಯಚಿತ್ರದ ಟ್ರೇಲರ್ ಗೆ ಅಂತಾರಾಷ್ಟ್ರೀಯ ವನ್ಯ ಜೀವಿ ತಜ್ಞ ಸಂಜಯ್ ಗುಬ್ಬಿ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಸಂಜಯ್ ಗುಬ್ಬಿ, ಚಾಮರಾಜನಗರ ಅರಣ್ಯ ಪ್ರದೇಶದ ಮಲೆಮಹದೇಶ್ವರ ಹಾಗೂ ಕಾವೇರಿ ವನ್ಯಜೀವಿಧಾಮ ಪ್ರಾಣಿಗಳಿಗೆ ಮುಖ್ಯ ಆವಾಸ ಸ್ಥಾನವಾಗಿದೆ. ವನ್ಯಜೀವಿಗಳು ಹಾಗೂ ಪರಿಸರ ಸಂರಕ್ಷಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಸಾಕ್ಷ್ಯಚಿತ್ರ ನಿರ್ಮಿಸಲಾಗಿದೆ ಎಂದರು. ಸಾಕ್ಷ್ಯಾಚಿತ್ರವನ್ನು ಸುಮಾರು ನಾಲ್ಕು ವರ್ಷಗಳ ಕಾಲ ಚಿತ್ರೀಕರಣ ಮಾಡಲಾಗಿದ್ದು, ಏಷ್ಯಾ ಆನೆಗಳ ಕುರಿತು ಹೆಚ್ಚು ಒತ್ತು ನೀಡಲಾಗಿದೆ. ಇದೊಂದು ವಾಣಿಜ್ಯೇತರ ಸಾಕ್ಷ್ಯಚಿತ್ರವಾಗಿದೆ ಎಂದು ತಿಳಿಸಿದರು.
ಮಂಗಳೂರು ತಾಲೂಕಿನ ಎಲ್ಲಾ ಗ್ರಾಮಗಳು ಮಳೆಯಾಶ್ರಿತ ಕೃಷಿಯ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ ಹವಾಮಾನ…
ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ನೋಂದಾವಣೆಗೊಂಡ ರೈತರ ತಾಲೂಕಿನಲ್ಲಿ ವಿಮೆ ಮಾಡಿಸಲಾಗಿರುವ…
ಇಂದು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಪ್ರಮುಖವಾಗಿ ಕುಮುಟಾ ಮತ್ತು ಅಂಕೋಲಾದಲ್ಲಿ…
ಬೆಂಗಳೂರಿನ ಲಾಲ್ ಬಾಗ್ ನಲ್ಲಿರುವ ಡಾ. ಎಂ.ಎಚ್ ಮರೀಗೌಡ ಸಭಾಂಗಣದಲ್ಲಿ ಮೂರು ದಿನಗಳ…
ಜೇನು ಕೃಷಿ ಲಾಭದಾಯಕವಾಗಿದ್ದು, ರೈತರು ಈ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೇಂದ್ರ…
24.05.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…