ನೈಸರ್ಗಿಕ ಕೃಷಿ ಕುರಿತ ತರಬೇತಿ ಶಿಬಿರ – 30 ಕೃಷಿ ಸಖಿಯರಿಗೆ ತರಬೇತಿ

November 21, 2025
10:45 AM

ಬೀದರ್‌ ತೋಟಗಾರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ  ನೈಸರ್ಗಿಕ ಕೃಷಿ ಕುರಿತ , 5 ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು.  ಇದೇ ವೇಳೆ ನೈಸರ್ಗಿಕ ಕೃಷಿ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ 30 ಸಂಪನ್ಮೂಲ ವ್ಯಕ್ತಿಗಳಿಗೆ ರಾಸಾಯನಿಕ ರಸಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮ, ಸಾವಯವಗೊಬ್ಬರ ಬಳಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು.

Advertisement
Advertisement

ಬೀದರ್‌ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಈಗಾಗಲೇ ಮೊದಲ ತಂಡದ 30 ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲಾಗಿದ್ದು, 2ನೇ ತಂಡದ 30 ಕೃಷಿ ಸಖಿಯರಿಗೆ ಕೃಷಿ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಿಂದ ತರಬೇತಿ ನೀಡಲಾಗುವುದು ಎಂದು ತರಬೇತಿ ಆಯೋಜಕರಾದ ಡಾ.ಎಸ್‌.ವಿ ಪಾಟೀಲ ತಿಳಿಸಿದರು.

ಜಂಟಿ ಕೃಷಿ ನಿರ್ದೇಶಕರಾದ ಆರ್‌. ದೇವಿಕಾ , ನೈಸರ್ಗಿಕ ಕೃಷಿ ಹೆಚ್ಚಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡ ರೈತರಿಗೆ,  ಪ್ರತಿ ವರ್ಷ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ಒಂದು ಕೋಟಿ ರೈತರನ್ನು ಇದರ ವ್ಯಾಪ್ತಿಗೆ ತರಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.

ಕೃಷಿ ಸಖಿ ಪ್ರೇಮಲಾ,  ತರಬೇತಿ ಅವಧಿಯಲ್ಲಿ  ನೈಸರ್ಗಿಕ ಕೃಷಿಗೆ ಅಗತ್ಯವಿರುವ ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ದಶಪರ್ಣಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು  ಎಂದು ತಿಳಿಸಿದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror