ಬೀದರ್ ತೋಟಗಾರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿರುವ ನೈಸರ್ಗಿಕ ಕೃಷಿ ಕುರಿತ , 5 ದಿನಗಳ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಯಿತು. ಇದೇ ವೇಳೆ ನೈಸರ್ಗಿಕ ಕೃಷಿ ಕುರಿತ ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು. ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಸಹಯೋಗದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ 30 ಸಂಪನ್ಮೂಲ ವ್ಯಕ್ತಿಗಳಿಗೆ ರಾಸಾಯನಿಕ ರಸಗೊಬ್ಬರ ಬಳಕೆಯಿಂದಾಗುವ ದುಷ್ಪರಿಣಾಮ, ಸಾವಯವಗೊಬ್ಬರ ಬಳಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ನೀಡಲಾಯಿತು.
ಬೀದರ್ ತೋಟಗಾರಿಕಾ ಮಹಾವಿದ್ಯಾಲಯದಲ್ಲಿ ಈಗಾಗಲೇ ಮೊದಲ ತಂಡದ 30 ಕೃಷಿ ಸಖಿಯರಿಗೆ ನೈಸರ್ಗಿಕ ಕೃಷಿ ಕುರಿತು ತರಬೇತಿ ನೀಡಲಾಗಿದ್ದು, 2ನೇ ತಂಡದ 30 ಕೃಷಿ ಸಖಿಯರಿಗೆ ಕೃಷಿ ವಿಜ್ಞಾನಿಗಳು ಮತ್ತು ಪ್ರಗತಿಪರ ರೈತರಿಂದ ತರಬೇತಿ ನೀಡಲಾಗುವುದು ಎಂದು ತರಬೇತಿ ಆಯೋಜಕರಾದ ಡಾ.ಎಸ್.ವಿ ಪಾಟೀಲ ತಿಳಿಸಿದರು.
ಜಂಟಿ ಕೃಷಿ ನಿರ್ದೇಶಕರಾದ ಆರ್. ದೇವಿಕಾ , ನೈಸರ್ಗಿಕ ಕೃಷಿ ಹೆಚ್ಚಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರ ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಅಡಿ ನೈಸರ್ಗಿಕ ಕೃಷಿ ಅಳವಡಿಸಿಕೊಂಡ ರೈತರಿಗೆ, ಪ್ರತಿ ವರ್ಷ 4 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡುತ್ತಿದೆ. ಒಂದು ಕೋಟಿ ರೈತರನ್ನು ಇದರ ವ್ಯಾಪ್ತಿಗೆ ತರಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಕೃಷಿ ಸಖಿ ಪ್ರೇಮಲಾ, ತರಬೇತಿ ಅವಧಿಯಲ್ಲಿ ನೈಸರ್ಗಿಕ ಕೃಷಿಗೆ ಅಗತ್ಯವಿರುವ ಜೀವಾಮೃತ, ಬೀಜಾಮೃತ, ಘನ ಜೀವಾಮೃತ, ದಶಪರ್ಣಿ ಸೇರಿದಂತೆ ಹಲವು ವಿಚಾರಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು ಎಂದು ತಿಳಿಸಿದರು.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…