ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಶ್ರೀ ದುರ್ಗಾ ಕಂಪ್ಯೂಟರ್ ಗುತ್ತಿಗಾರು ಇದರ ವತಿಯಿಂದ ನವೋದಯ ಮತ್ತು ಮೊರಾರ್ಜಿ ದೇಸಾಯಿ ಪ್ರವೇಶ ಪರೀಕ್ಷಾ ತರಬೇತಿ ಗ್ರಾಮೀಣ ಭಾಗದಲ್ಲಿ 5ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳಿಗಾಗಿ ಆಯೋಜಿಸಲಾಗಿದೆ.
ಮಕ್ಕಳಿಗೆ ಕಲಿಕೆ ಜೊತೆಗೆ ಗ್ರಂಥಾಲಯದ ಸದ್ಬಳಕೆ ಕ್ರಿಯಾತ್ಮಕ ಚಟುವಟಿಕೆ ಮುಖಾಂತರ ಬೌದ್ಧಿಕ ಸಾಮರ್ಥ್ಯ ಚಟುವಟಿಗಳು, ಗಣಿತ,ಹಾಗೂ ಭಾಷಾ ವಿಷಯಗಳ ಕುರಿತು ತರಬೇತಿ ಇರುವುದು. ತರಬೇತಿ ಉಚಿತವಾಗಿದೆ. ನೋಂದಣಿ ಶುಲ್ಕ ಇರಿಸಲಾಗಿದ್ದು ಪ್ರತಿ ಆದಿತ್ಯವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ತರಗತಿಗಳು ನಡೆಯಲಿದೆ. ಸತತ ನಾಲ್ಕು ವರ್ಷ ಶ್ರೀ ದುರ್ಗಾ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ನಡೆಸಲಾಗುತ್ತಿದ್ದ ಈ ತರಬೇತಿ ಈ ಬಾರಿ ಮಕ್ಕಳಿಗೆ ಪುಸ್ತಕದ ಅಭಿರುಚಿ ಬೆಳೆಸುವ ನಿಟ್ಟಿನಲ್ಲಿ ಗ್ರಂಥಾಲಯದಲ್ಲಿ ಓದುವ ಹವ್ಯಾಸ ಬೆಳೆಸುವುದು ಮತ್ತು ಗ್ರಾಮೀಣ ಪರಿಸರದ ಪ್ರತಿ ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಬಗ್ಗೆ ಅರಿವು ಮೂಡಿಸುವುದಾಗಿದೆ.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…