Advertisement
MIRROR FOCUS

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

Share

ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟಲು ವೃಕ್ಷ ಸಂವರ್ಧನೆ ಮತ್ತು ಸಂರಕ್ಷಣೆಯೇ ಪ್ರಮುಖ ಮಾರ್ಗವೆಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಜಿಲ್ಲಾ ಅರಣ್ಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಕುರಿತು ಸ್ಪಷ್ಟ ನಿರ್ದೇಶನ ನೀಡಿದರು.

ರಾಜ್ಯದ ಹಸಿರು ಹೊದಿಕೆಯನ್ನು ಹೆಚ್ಚಿಸುವುದು ಅತ್ಯಾವಶ್ಯಕವಾಗಿದ್ದು, ಜಿಲ್ಲೆಯ ವಿವಿಧ ವಲಯಗಳಲ್ಲಿರುವ ನರ್ಸರಿಗಳಲ್ಲಿ ತೇಗ, ಶ್ರೀಗಂಧ, ಹೊನ್ನೆ ಸೇರಿದಂತೆ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ರೈತರಿಗೆ ವಿತರಿಸುವಂತೆ ಸಚಿವರು ಸೂಚಿಸಿದರು.

ಪ್ರಮುಖ ಸೂಚನೆಗಳು

  • ನರ್ಸರಿಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಸಿಗಳ ಉತ್ಪಾದನೆ
  • ರೈತರಿಗೆ ತೇಗ, ಶ್ರೀಗಂಧ, ಹೊನ್ನೆ ಸಸಿಗಳ ವಿತರಣೆ
  • ಹಸಿರು ಹೊದಿಕೆ ಹೆಚ್ಚಿಸಲು ವಿಶೇಷ ಯೋಜನೆ

ಚಿರತೆ ಸಮಸ್ಯೆಗೆ ಶಾಶ್ವತ ಪರಿಹಾರ : ಹೆಚ್ಚುತ್ತಿರುವ ಚಿರತೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾಡಿನಂಚಿನ ಗ್ರಾಮಸ್ಥರೊಂದಿಗೆ ಸಮನ್ವಯ ಬೆಳೆಸಿ, ಅರಣ್ಯ ಅಪರಾಧಗಳನ್ನು ತಡೆಗಟ್ಟುವಂತೆ ಸೂಚಿಸಿದರು.

ಅಮೂಲ್ಯ ಮರಗಳಿಗೆ GI ಟ್ಯಾಗ್ : ಅರಣ್ಯ ಪ್ರದೇಶಗಳು ಮತ್ತು ಪಟ್ಟಾ ಜಮೀನುಗಳಲ್ಲಿ ಬೆಳೆದಿರುವ ಶ್ರೀಗಂಧ, ರಕ್ತಚಂದನ, ಬೀಟೆ ಮತ್ತು ತೇಗದಂತಹ ಬೆಲೆಬಾಳುವ ಮರಗಳಿಗೆ GI ಟ್ಯಾಗ್ ನೀಡುವ ಕುರಿತು ಕ್ರಮ ಕೈಗೊಳ್ಳಲು ಸಚಿವರು ಸೂಚಿಸಿದ್ದಾರೆ. ಇದರಿಂದ ಅರಣ್ಯ ಸಂಪತ್ತಿನ ಕಳ್ಳತನವನ್ನು ತಡೆಯಲು ಸಹಕಾರಿಯಾಗಲಿದೆ.

ಆನೆ-ಮಾನವ ಸಂಘರ್ಷ ನಿಯಂತ್ರಣ : ಆನೆ-ಮಾನವ ಸಂಘರ್ಷವನ್ನು ಕಡಿಮೆ ಮಾಡಲು,

  • ರೈಲ್ವೆ ಬ್ಯಾರಿಕೇಡ್
  • ಆನೆ ಕಂದಕ
  • ಸೌರ ಬೇಲಿ ನಿರ್ಮಾಣ

ಈ ಕ್ರಮಗಳ ಬಗ್ಗೆ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Karnataka Forest Minister Eshwar B. Khandre emphasized that tree plantation is the key solution to tackle global warming. He instructed officials to expand nurseries, distribute saplings to farmers, and take steps to control wildlife conflicts and protect forest resources.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

6 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

14 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

15 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

15 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago