ಸುದ್ದಿಗಳು

ಮಳೆ ಹಿನ್ನೆಲೆಯಲ್ಲಿ ಗಿರಿಶಿಖರಗಳ ಟ್ರೆಕ್ಕಿಂಗ್ ನಿಷೇಧ | ನೀರಿಗೆ ಇಳಿಯದಂತೆ ಜಿಲ್ಲಾಧಿಕಾರಿ ಆದೇಶ |

Share

ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅನಾಹುತಗಳು ಸಂಭವಿಸದಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮ ವಹಿಸಬೇಕಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪ್ರವಾಸಿಗರು ವಿವಿಧ ಗಿರಿತಾಣಗಳಿಗೆ ಚಾರಣಕ್ಕಾಗಿ ತಂಡೋಪ ತಂಡವಾಗಿ ಭೇಟಿ ನೀಡುವುದು, ಸಾಹಸ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಜಿಲ್ಲಾಡಳಿತ ಗಮನಕ್ಕೆ ಬಂದಿರುತ್ತದೆ.

ದ ಕ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದ ಘಟನೆಗಳು ಸಂಭವಿಸುತ್ತಿರುತ್ತವೆ. ಆದ್ದರಿಂದ ಸಾರ್ವಜನಿಕರ ಹಿತಾಸಕ್ತಿಯನ್ನು ಗಮನಿಸಿ ಸೂಕ್ತ ಸುರಕ್ಷತಾ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸೂಚನೆ: ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಹಾಗೂ ಪ್ರವಾಸಿಗರು ಅತೀಯಾದ ಮಳೆಯಿಂದ ಭೂಕುಸಿತ, ಗುಡ್ಡ ಕುಸಿತ, ಸಿಡಿಲು ಬಡಿತ ಮರಬೀಳುವಂತಹ ದುರ್ಘಟನೆಗಳು ನಡೆಯುವ ಸಂಭವವಿರುವುದರಿಂದ ಜಿಲ್ಲೆಯಲ್ಲಿ ಗಿರಿತಾಣ, ಶಿಖರಗಳ ಚಾರಣವನ್ನು  ಚಾರಣಗಳಿಗೆ ಮಳೆಗಾಲದ ಅವಧಿಯಲ್ಲಿ ಹೊಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್, ಅರಣ್ಯ ಇಲಾಖೆವತಿಯಿಂದ ಕೈಗೊಳ್ಳುವ ಟ್ರೆಕ್ಕಿಂಗ್ ಸಾಹಸ ಚಟುವಟಿಕೆಗಳು ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಈ ಆದೇಶದ ಉಲ್ಲಂಘನೆಯು ಡಿನಾನ್ಸರ್ ಮ್ಯಾನೇಜೇಂಟ್ ಕಾಯ್ದೆ 2005 ಸೆಕ್ಷನ್ 51ಬಿ ಮತ್ತು ಸಂಬಂದಿತ ನಿಯಮ/ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಮುಲ್ಲೈ ಮುಗಿಲನ್ ಎಂ.ಪಿ ಅವರು ಸೂಚಿಸಿದ್ದಾರೆ.

ಇದರ ಜೊತೆಗೆ ಜಿಲ್ಲೆಯಾದ್ಯಂತ ಇರುವ ಜಲಪಾತ, ಝರಿ, ನದಿ, ಸಮುದ್ರ, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು, ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಅದೇಶಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದು ವರ್ಷದಲ್ಲಿ 10 ಲಕ್ಷ ಮನೆಗಳಿಗೆ ಸೌರ ಫಲಕ

ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…

12 hours ago

ನಂದಿನಿ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ

ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್‌ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …

12 hours ago

ಹೆಚ್ಚುತ್ತಿರುವ ಸೈಬರ್ ಅಪರಾಧ ಪ್ರಕರಣಗಳು | ಒಂದು ವರ್ಷದಲ್ಲಿ 22 ಸಾವಿರ ಸೈಬರ್ ಪ್ರಕರಣ ದಾಖಲು |

ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…

12 hours ago

ಬೆಳ್ಳಿ ಧರಿಸುವುದು ಎಲ್ಲಾ ರಾಶಿಯವರಿಗೆ ಉತ್ತಮವೇ…? | ಯಾವೆಲ್ಲಾ ರಾಶಿಗಳಿಗಳಿಗೆ ಹಾನಿ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…

20 hours ago

ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ

ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…

20 hours ago