Advertisement
MIRROR FOCUS

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

Share

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌  ಲೋಕಸಭೆಯಲ್ಲಿ ಹೇಳಿದರು.

ಮುಂಗಾರು ಅಧಿವೇಶನಲದ ಪ್ರಶ್ನೋತ್ತರ ಕಲಾಪದಲ್ಲಿ,  ಕೃಷಿಕರಿಗಾಗಿ ಕೃಷಿ ಸಮ್ಮಾನ್‌ ನಿಧಿಯನ್ನು ಆರಂಭಿಸಲಾಗಿದೆ. ಇದರ ಅಡಿಯಲ್ಲಿ,  ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವರ್ಷಕ್ಕೆ  6 ಸಾವಿರ ರೂಪಾಯಿವರೆಗಿನ  ಬೆಂಬಲವನ್ನು ಒದಗಿಸಲಾಗುತ್ತಿದೆ.  ಕೃಷಿಯೋಗ್ಯ ಭೂಮಿಯನ್ನು ಹೊಂದಿರುವ ಎಲ್ಲಾ ಭೂ ಹಿಡುವಳಿ ರೈತ ಕುಟುಂಬಗಳಿಗೆ ಇದು ಅನ್ವಯ ಆಗುತ್ತಿದೆ ಎಂದು ಹೇಳಿದರು. ಈಗಾಗಲೇ 10 ಕೋಟಿಗೂ ಅಧಿಕ ಕೃಷಿಕರು ಈ ಲಾಭವನ್ನು ಪಡೆದುಕೊಂಡಿದ್ದಾರೆ ಎಂದು ಸಚಿವರು ವಿವರಿಸಿದರು.

ರೈತರಿಗೆ ನೀಡುತ್ತಿರುವ ಸಹಾಯಧನ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌, ಕೃಷಿಕರಿಗೆ ಸರ್ಕಾರದಿಂದ ಹಲವಾರು ಸಹಾಯ ಧನ ಮತ್ತು ಸಬ್ಸಿಡಿ ಯೋಜನೆಗಳು ಲಭ್ಯ ಇವೆ.  ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆ, ಸೂಕ್ಷ್ಮ ನೀರಾವರಿ ಯೋಜನೆ ಮತ್ತು ಮೀನುಗಾರಿಕಾ ಇಲಾಖೆಯಿಂದ ಒಳನಾಡು ಮೀನುಗಾರಿಕೆ ರಚಿಸುವ ಪ್ರತಿ ಮೀನು ಸಾಕಾಣಿಕ ಘಟಕಗಳಿಗೆ ಸಹಾಯಧನ ನೀಡಲಾಗುತ್ತಿದೆ ಎಂದರು. ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕೃಷಿ ಕ್ಷೇತ್ರವನ್ನು ಕಡೆಗಣಿಸಲಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದ ಕಲ್ಯಾಣವನ್ನು ಪ್ರಥಮ ಆದ್ಯತೆಯಾಗಿಸಿಕೊಂಡಿದ್ದಾರೆ ಎಂದರು.

ಬರ, ಪ್ರವಾಹ, ಚಂಡಮಾರುತ ಸೇರಿದಂತೆ ವಿವಿಧ ರೀತಿಯ  ನೈಸರ್ಗಿಕ ವಿಕೋಪಗಳಿಂದ ರೈತರ ಬೆಳೆ ನಷ್ಟವನ್ನು ಸರಿದೂಗಿಸಲು ಆರ್ಥಿಕ ನೆರವು ನೀಡುವ ಯೋಜನೆಯನ್ನೂ ಕೇಂದ್ರ ಸರ್ಕಾರ ಜಾರಿಗೊಳಿಸಿದೆ ಎಂದು ಸಚಿವರು ಹೇಳಿದರು . ಕೃಷಿ ಕ್ಷೇತ್ರದಲ್ಲಿ ಸುಸ್ಥಿರ ಉತ್ಪಾದನೆಗೆ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಇದೇ ಉದ್ದೇಶಕ್ಕಾಗಿ ಜಾರಿಗೊಳಿಸಲಾಗಿದೆ ಎಂದು ಹೇಳಿದರು.ಇದು ರೈತರ ಬೇಡಿಕೆ ಆಧರಿತ ಯೋಜನೆಯಾಗಿದ್ದು, ಬೆಳೆ ವೈಫಲ್ಯದ ಆರ್ಥಿಕ ನಷ್ಟವನ್ನು ಕಡಿಮೆ ಮಾಡುವ ಮೂಲಕ, ಇದು ರೈತರ ಆದಾಯವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ ಎಂದರು. 2024-25 ರ ಅವಧಿಯಲ್ಲಿ  14 ಖಾರಿಫ್ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು  ಹೆಚ್ಚಿಸುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ತೆಗೆದುಕೊಂಡಿದ್ದಾರೆ. ಇದು ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ  ಇರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

9 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

9 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

9 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

12 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago