#GreenRevolution | ಡಾ. ಎಂ. ಎಸ್.  ಸ್ವಾಮಿನಾಥನ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತಾ.. : ಹಸಿವು ನಿವಾರಿಸುವ ಹೆಸರಲ್ಲಿ  ಉಸಿರು ತೆಗೆವ “ಪರಿಹಾರಗಳ ”  ಕುರಿತು |ಭಾಗ – 3

ಭಾರತದ ಗೊಡೋನುಗಳಲ್ಲಿ ಅಪಾರ ಆಹಾರ ಧಾನ್ಯ ಸಂಗ್ರಹಣೆ ಇರುವುದು ನಿಜ. ಈ ಪ್ರಮಾಣದ ಆಹಾರ ಉತ್ಪಾದನೆ ಸಾಧ್ಯವಾದದ್ದು ಹಸಿರುಕ್ರಾಂತಿಯಿಂದ ಎಂಬುದೂ ಸತ್ಯವೇ. ಆದರೆ ಈ ಅಪಾರ ಪ್ರಮಾಣದ ಆಹಾರ ಉತ್ಪಾದನೆಯಿಂದ ರೈತಾಪಿಯ ಬಾಳು ಮೊದಲಿಗಿಂತ ಹಸನು ಆಗಿದೆಯೇ ಎಂಬ ಪ್ರಶ್ನೆಗೆ ಸರ್ಕಾರವೂ ಉತ್ತರ ಕೊಡುವುದಿಲ್ಲ. ಬೊರ್ಲಾಗ ಕೂಡ  ಸಾಯುವವರೆಗೆ ಉತ್ತರ ಕೊಡಲಿಲ್ಲ.