Advertisement
ಸುದ್ದಿಗಳು

ಶೆಟ್ಟರ್‌ಗೆ ಟಿಕೆಟ್‌ ಕೊಡಿಸಲು ಯತ್ನಿಸಿದ್ದೆ, ಹೈಕಮಾಂಡ್‌ ಪ್ಲಾನ್ ಬೇರೆಯೇ ಇತ್ತು: ಬಿ.ಎಸ್. ಯಡಿಯೂರಪ್ಪ

Share

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ನಾನು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ ಪಕ್ಷದ ಕೇಂದ್ರದ ನಾಯಕತ್ವ (ಹೈಕಮಾಂಡ್) ಬೇರೆ ಯೋಜನೆಗಳನ್ನು ಹೊಂದಿತ್ತು” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Advertisement
Advertisement
Advertisement

‘ದಿ ಹಿಂದೂ’ ಪತ್ರಿಕೆಯ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು, “ಹೌದು, ನಾನು ನನ್ನ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇನೆ. ಆದರೆ, ಪಕ್ಷದ ಕೇಂದ್ರ ನಾಯಕತ್ವವು ಬೇರೆ ಯೋಜನೆಗಳನ್ನು ಹೊಂದಿತ್ತು. ಕೆ.ಎಸ್.ಈಶ್ವರಪ್ಪ, ಶೆಟ್ಟರ್ ಸೇರಿದಂತೆ ಹಲವು ನಾಯಕರಿಗೆ ಈ ಬಾರಿ ಟಿಕೆಟ್ ನೀಡಿಲ್ಲ. ಪಕ್ಷದ ಯುವ ಕಾರ್ಯಕರ್ತರಿಗೆ ಹೆಚ್ಚಿನ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದರು” ಎಂದು ತಿಳಿಸಿದ್ದಾರೆ.

Advertisement

“ಬಿಜೆಪಿಯು ಲಿಂಗಾಯತರಿಗೆ ಟಿಕೆಟ್ ನಿರಾಕರಿಸುವ ಮೂಲಕ ಹತ್ತಿಕ್ಕುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಂತಹ ಹಿರಿಯ ನಾಯಕರು ಬಿಜೆಪಿ ತೊರೆದಿದ್ದಾರೆ. ಸಮುದಾಯದ ನಾಯಕರಾಗಿ ಇದರ ಬಗ್ಗೆ ಏನು ಹೇಳುತ್ತೀರಿ?” ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

“ಶೆಟ್ಟರ್ ಅವರಿಗೆ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸೇರಿದಂತೆ ಎಲ್ಲ ಸ್ಥಾನಮಾನ, ಗೌರವ ನೀಡಿದ್ದೆವು. ಅವರಿಗೇನಾದರೂ ಕುಂದುಕೊರತೆಗಳಿದ್ದರೆ ನಮ್ಮೊಂದಿಗೆ ಚರ್ಚಿಸಬಹುದಿತ್ತು. ಕಾರಣಾಂತರಗಳಿಂದ ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಲು ಪಕ್ಷದ ನಾಯಕತ್ವ ಸಿದ್ಧವಿಲ್ಲ ಎಂದು ಹೇಳಿದ್ದೆವು. ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿ ಕೇಂದ್ರ ಸಚಿವರಾಗುವಂತೆ ಕೇಳಿದ್ದೆವು. ಅವರಿಗೆ ಆಸೆಯಿದ್ದರೆ ಅವರ ಪತ್ನಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಸುವಂತೆಯೂ ಹೇಳಿದ್ದೆವು. ಇಷ್ಟೆಲ್ಲ ಆಶ್ವಾಸನೆ ನೀಡಿದರೂ ಪಕ್ಷ ತ್ಯಜಿಸಿದರು” ಎಂದಿದ್ದಾರೆ.

Advertisement

ಮುಂದುವರಿದು, “ಅದೇ ರೀತಿ ಸವದಿ ಅವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿ ನಂತರ ಉಪಮುಖ್ಯಮಂತ್ರಿ ಮಾಡಿದ್ದೆವು. ಅವರು ಆರು ವರ್ಷಗಳ ಎಂಎಲ್‌ಸಿ ಅವಧಿಯ ಕೇವಲ 10 ತಿಂಗಳುಗಳನ್ನು ಪೂರ್ಣಗೊಳಿಸಿದ್ದಾರೆ ಎಂಬುದು ನಿಮಗೆ ತಿಳಿದಿರಬೇಕು. ಅವರನ್ನು ಸಚಿವರನ್ನಾಗಿ ಮಾಡಿರಬಹುದು ಅಥವಾ ಬೇರೆ ಸ್ಥಾನಮಾನ ನೀಡಿರಬಹುದು. ಸ್ವಾರ್ಥಕ್ಕಾಗಿ ಪಕ್ಷ ತೊರೆದಿದ್ದು, ಜನರೇ ತಕ್ಕ ಪಾಠ ಕಲಿಸಲಿದ್ದಾರೆ” ಎಂದು ತಿಳಿಸಿದ್ದಾರೆ.

“ಬಿಜೆಪಿಯಲ್ಲಿನ ಬಂಡಾಯಕ್ಕೆ ಬಿ.ಎಲ್.ಸಂತೋಷ್ ಕಾರಣ ಎಂಬ ಬಲವಾದ ಆರೋಪಗಳಿವೆ. ನಿಮ್ಮ ಅಭಿಪ್ರಾಯ ಏನು?” ಎಂಬ ಪ್ರಶ್ನೆಗೆ, “ಇಂತಹ ಆರೋಪಗಳಿಗೆ ಬೆಲೆ ಇಲ್ಲ. ಪೂರ್ಣಾವಧಿ ಕಾರ್ಯಕರ್ತರಾಗಿ ಪಕ್ಷದ ಬಲವರ್ಧನೆಗೆ ಸಂತೋಷ್ ಹಗಲಿರುಳು ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸಲಾಗದೆ ಕೆಲವರು ಇಂತಹ ಆರೋಪ ಮಾಡುತ್ತಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.

Advertisement

ಬಂಜಾರ ಸಮುದಾಯವು ಒಳಮೀಸಲಾತಿ ಪ್ರಸ್ತಾಪವನ್ನು ವಿರೋಧಿಸಿ ಮಾಡಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಅದರಲ್ಲಿ ಗಂಭೀರವಾದದ್ದೇನೂ ಇಲ್ಲ. ನಾವು ಎಲ್ಲರನ್ನೂ ಸಮಾನವಾಗಿ ಪರಿಗಣಿಸಿದ್ದೇವೆ ಮತ್ತು ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ಈ ಬಾರಿ ಬಹುಮತವನ್ನು ಪಡೆದು ಹಳೆಯ ಸಂಪ್ರದಾಯವನ್ನು ಮುರಿಯುತ್ತೇವೆ. ನಾವು ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ” ಎಂದು ಹೇಳಿದ್ದಾರೆ.

“ನಾವು ಅಭಿವೃದ್ಧಿಯ ಬಗ್ಗೆ ಮಾತ್ರ ಮಾತನಾಡುತ್ತಿದ್ದೇವೆ. ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಜಾರಿಗೆ ತಂದ ಕಾರ್ಯಕ್ರಮಗಳ ಹೊರತಾಗಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ನೀಡಿದ ಕಾರ್ಯಕ್ರಮಗಳನ್ನು ತೋರಿಸಲು ನಾವು ಜನಾದೇಶವನ್ನು ಬಯಸುತ್ತೇವೆ. ನಮ್ಮ ಅಭಿಯಾನ ಅಭಿವೃದ್ಧಿಯ ಮೇಲೆ ಆಧಾರಿತವಾಗಿದೆ. ಸುಳ್ಳು ಪ್ರಚಾರಕ್ಕೆ ಬೆಲೆ ಇಲ್ಲ. ಶೇ.40ರಷ್ಟು ಕಮಿಷನ್ ಎಂಬ ಆರೋಪ ಎತ್ತುತ್ತಿರುವವರಿಗೇ ಹಿನ್ನಡೆಯಾಗುತ್ತದೆ. ನಾವು ಖಂಡಿತವಾಗಿಯೂ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕ್ಯಾಂಪ್ಕೋ ತಯಾರಿಕೆಯ ಕೊಬ್ಬರಿ ಎಣ್ಣೆ “ಕಲ್ಪ” 5 ಲೀಟರ್ ಕ್ಯಾನ್ ಬಿಡುಗಡೆ

ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…

2 days ago

ಮುಂಜಾನೆ ಏಳಬೇಕು, ಬೇಗನೇ ಏಳಬೇಕು

ಮುಂಜಾನೆಯ ಸಮಯದಲ್ಲಿ ಸ್ಥಬ್ಧವೆನ್ನಿಸುವ ವಾತಾವರಣದಲ್ಲೂ ಸಾಕಷ್ಟು ಹಕ್ಕಿಗಳ ಚಿಲಿಪಿಲಿ ಶಬ್ದ ಕೇಳುತ್ತಿರುತ್ತದೆ. ಆದರೆ…

2 days ago

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |

ದಕ್ಷಿಣ ಬಂಗಾಳಕೊಲ್ಲಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆ ಉಂಟಾಗುವ ಸಾಧ್ಯತೆಗಳಿದ್ದು, ಜನವರಿ 18 ರಂದು…

3 days ago

ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ…

3 days ago

ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ವಿಶೇಷ ಕಾರ್ಯಕ್ರಮ…

3 days ago

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?

ನಾಗರಿಕತೆ ಬೆಳವಣಿಗೆ, ಅಭಿವೃದ್ಧಿ ಅಂದರೆ ವ್ಯಕ್ತಿತ್ವಗಳೂ ಬೆಳೆಯಬೇಕು. ಅಭಿವೃದ್ಧಿಯ ಸೂಚ್ಯಂಕವೇ ವ್ಯಕ್ತಿತ್ವದ ಬೆಳವಣಿಗೆ…

3 days ago