ತ್ರಿಪುರಾದಲ್ಲಿ ಉಂಟಾದ ಭಾರೀ ಪ್ರವಾಹದಿಂದ ಕೃಷಿ ಕ್ಷೇತ್ರದ ಮೇಲೆ ಅಪಾರ ಹಾನಿಯುಂಟು ಮಾಡಿದೆ. ಗ್ರಾಮೀಣ ಭಾಗವೂ ಸಂಕಷ್ಟಕ್ಕೆ ಸಿಲುಕಿದೆ. ಕೊಯ್ಲಿಗೆ ಸಿದ್ಧವಾಗಿರುವ ಭತ್ತದ ಬೆಳೆಗಳು ನಾಶವಾಗಿವೆ, ರಸ್ತೆಗಳು, ಸೇತುವೆಗಳು ಕಿತ್ತುಹೋಗಿದೆ, ವಿದ್ಯುತ್ ಪೂರೈಕೆ ತೀವ್ರವಾಗಿ ಅಸ್ತವ್ಯಸ್ತಗೊಂಡಿದೆ. ಪ್ರವಾಹದಿಂದ 1,017 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಸುಮಾರು 20,000 ಮನೆಗಳಿಗೆ ಹಾನಿಯಾಗಿದೆ. ನಿರಂತರ ಮಳೆ ಮತ್ತು ಭೂಕುಸಿತದಿಂದ ಶಾಲೆಯ ಮೂಲಸೌಕರ್ಯಕ್ಕೂ ಹಾನಿಯಾಗಿದೆ. ಪ್ರಾಥಮಿಕ ಮೌಲ್ಯಮಾಪನದ ಪ್ರಕಾರ 70,000 ಹೆಕ್ಟೇರ್‌ಗಿಂತಲೂ ಹೆಚ್ಚು ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಸದ್ಯ ಕೃಷಿ ವಲಯವು ಅತೀ ಹೆಚ್ಚು ಹಾನಿಗೊಳಗಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 2.43 ಲಕ್ಷ ಮೆಟ್ರಿಕ್ ಟನ್‌ಗಳ ಉತ್ಪಾದನೆ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ.
The agriculture sector in Tripura has suffered extensive damage due to severe flooding. Rural areas have been particularly hard hit, with ready-to-harvest paddy crops being destroyed, along with damage to roads and bridges. Additionally, the power supply has been severely disrupted.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…