ಅ.13 | ತುಳು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ | ಸಿರಿಚಾವಡಿ ಪುರಸ್ಕಾರ ಕಾರ್ಯಕ್ರಮ |

Advertisement
Advertisement

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.

Advertisement

ಕಾರ್ಯಕ್ರಮವನ್ನು  ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.

Advertisement
Advertisement

ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ  ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ  ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್  ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ  ಗೋಪಾಲ ಬಂಗೇರ ಕೆ. ಅಗರಿ ಎಂಟರ್‍ಪ್ರೈಸಸ್‍ನ ಮಾಲಕರಾದ ಅಗರಿ  ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ  ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.

Advertisement
Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಅ.13 | ತುಳು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ | ಸಿರಿಚಾವಡಿ ಪುರಸ್ಕಾರ ಕಾರ್ಯಕ್ರಮ |"

Leave a comment

Your email address will not be published.


*