ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಗೋಪಾಲ ಬಂಗೇರ ಕೆ. ಅಗರಿ ಎಂಟರ್‍ಪ್ರೈಸಸ್‍ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…