Advertisement
MIRROR FOCUS

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

Share

ಒಂದು ಕಾಲದಲ್ಲಿ ತೆಂಗಿನ ತೋಟಗಳಿಗೆ ಹೆಸರುವಾಸಿಯಾಗಿದ್ದ ತುಮಕೂರು ಜಿಲ್ಲೆಯಲ್ಲಿ ಈಗ ಅಡಿಕೆ ಕೃಷಿ ವೇಗವಾಗಿ ವಿಸ್ತರಿಸುತ್ತಿದೆ. ಕೊಬ್ಬರಿ ಬೆಲೆಯಲ್ಲಿನ ಅನಿಶ್ಚಿತತೆ ಹಾಗೂ ಉತ್ತಮ ಆದಾಯದ ನಿರೀಕ್ಷೆಯಿಂದ ರೈತರು ಅಡಿಕೆ ಬೆಳೆ ಕಡೆಗೆ ತಿರುಗುತ್ತಿರುವುದು ಜಿಲ್ಲೆಯ ಕೃಷಿ ಚಿತ್ರಣವನ್ನೇ ಬದಲಾಯಿಸುತ್ತಿದೆ. ಇದರೊಂದಿಗೆ ಅಡಿಕೆ ಸಸಿಗಳಿಗೆ ಬೇಡಿಕೆ ಹೆಚ್ಚಾಗಿದ್ದು, ಖಾಸಗಿ ನರ್ಸರಿಗಳಲ್ಲಿ ಒಂದು ಸಸಿಯ ಬೆಲೆ ₹150 ರಿಂದ ₹250 ರವರೆಗೆ ತಲುಪಿದೆ.

ತೋಟಗಾರಿಕೆ ಇಲಾಖೆಯ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ತೋಟಗಾರಿಕೆ ಇಲಾಖೆ ಹಾಗೂ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸೇರಿ ಸುಮಾರು 5.41 ಲಕ್ಷ ಅಡಿಕೆ ಸಸಿಗಳನ್ನು ರೈತರಿಗೆ ವಿತರಿಸಿವೆ. 2022-23ನೇ ಸಾಲಿನಲ್ಲಿ ಮಾತ್ರ 1.85 ಲಕ್ಷಕ್ಕೂ ಹೆಚ್ಚು ಸಸಿಗಳು ವಿತರಿಸಲ್ಪಟ್ಟಿವೆ.

ಪ್ರಸ್ತುತ ತುಮಕೂರು ಜಿಲ್ಲೆಯಲ್ಲಿ ಸುಮಾರು 94 ಸಾವಿರ ಹೆಕ್ಟೇರ್‌ಗೂ ಅಧಿಕ ಪ್ರದೇಶದಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ವರ್ಷಕ್ಕೆ ಸರಾಸರಿ 1.05 ಲಕ್ಷ ಮೆಟ್ರಿಕ್ ಟನ್ ಅಡಿಕೆ ಉತ್ಪಾದನೆ ಆಗುತ್ತಿದ್ದು, ಜಿಲ್ಲೆಯ ಕೃಷಿ ಆರ್ಥಿಕತೆಯಲ್ಲಿ ಅಡಿಕೆ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತಿದೆ.

ಸರ್ಕಾರಿ ನರ್ಸರಿಗಳಲ್ಲಿ ಅಡಿಕೆ ಸಸಿಗಳನ್ನು ₹25ಕ್ಕೆ ಹಾಗೂ ಕೃಷಿ ವಿಜ್ಞಾನ ಕೇಂದ್ರದಲ್ಲಿ ₹60ಕ್ಕೆ ನೀಡಲಾಗುತ್ತಿದ್ದರೂ, ಲಭ್ಯತೆ ಕಡಿಮೆ ಇರುವುದರಿಂದ ಹೆಚ್ಚಿನ ರೈತರು ಖಾಸಗಿ ನರ್ಸರಿಗಳತ್ತ ಮುಖ ಮಾಡುತ್ತಿದ್ದಾರೆ. ಅಲ್ಲಿ ಕಳೆದ ವರ್ಷ ₹80-100 ಇದ್ದ ಸಸಿಗಳ ಬೆಲೆ ಈಗ ₹150-250ಕ್ಕೆ ಏರಿದೆ.

ಹೇಮಾವತಿ ಯೋಜನೆಯ ನೀರಾವರಿ ವ್ಯಾಪ್ತಿಯ ಪ್ರದೇಶಗಳಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಗುಬ್ಬಿ ತಾಲ್ಲೂಕು ಅತಿ ಹೆಚ್ಚು ಅಡಿಕೆ ಪ್ರದೇಶ ಹೊಂದಿರುವ ತಾಲ್ಲೂಕಾಗಿ ಹೊರಹೊಮ್ಮಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಅಡಿಕೆ ಲಾಭದಾಯಕ ಬೆಳೆ ಎಂಬ ಕಾರಣಕ್ಕೆ ರೈತರು ಹೆಚ್ಚಿನ ಪ್ರಮಾಣದಲ್ಲಿ ಅಡಿಕೆ ಕಡೆಗೆ ತಿರುಗುತ್ತಿರುವುದು ನಿಜ. ಆದರೆ ಅಡಿಕೆ ಹೆಚ್ಚು ನೀರು ಬೇಕಾಗುವ ಬೆಳೆಯಾಗಿದ್ದು, ಇದರೊಂದಿಗೆ ಕೊಳವೆಬಾವಿಗಳ ಸಂಖ್ಯೆ ಹೆಚ್ಚುತ್ತಿರುವುದು ಭೂಗರ್ಭ ಜಲದ ಮೇಲೆ ಒತ್ತಡ ಹೆಚ್ಚಿಸುವ ಸಾಧ್ಯತೆಯೂ ಇದೆ ಎಂದು ತಜ್ಞರು ಅಭಿಪ್ರಾಯಪಡುತ್ತಿದ್ದಾರೆ.

Farmers in Tumakuru, traditionally known for coconut cultivation, are increasingly shifting to arecanut farming due to volatile copra prices and better income prospects. The surge in demand has pushed arecanut sapling prices up to ₹250 in private nurseries, while cultivation has expanded to over 94,000 hectares in the district.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

4 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

4 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

4 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

8 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago