ತುಮಕೂರು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಮಳೆಯಿಂದ ಬೆಳೆ ಹಾನಿಯಾದ ಕ್ಷೇತ್ರಗಳಿಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
Advertisement
ಜಿಲ್ಲೆಯಲ್ಲಿ ಅಕ್ಟೋಬರ್‌ನಲ್ಲಿ 115.2 ಮಿ.ಮೀ. ವಾಡಿಕೆ ಮಳೆಯಿದ್ದು, ಇಲ್ಲಿಯವರೆಗೆ 271.30 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 108.7 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ರಾಗಿ, ನೆಲಗಡಲೆ, ಮುಸುಕಿನ ಜೋಳ, ಹತ್ತಿ ಮತ್ತು ಇತರೆ ಕೃಷಿ ಬೆಳೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 93.6 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ. ಬೆಳೆ ಹಾನಿಯಾದ ರೈತ ಫಲಾನುಭವಿಗಳ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ, ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕಾ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement