ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ ಸೂಕ್ಷ್ಮ ವಲಯವಾಗಿದ್ದು, ಅಲ್ಲಿರುವ ಅರಣ್ಯ ಪ್ರದೇಶ ಉಳಿಯಬೇಕು. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಿಂಕಾರ ಗಣಿಗಾರಿಕೆಗೆ ಸೂಕ್ತ ಪ್ರದೇಶವಲ್ಲ. ಕರಡಿ, ಜಿಂಕೆ ಸೇರಿದಂತೆ ಎಲ್ಲಾ ಪ್ರಾಣಿಗಳ ಆಶ್ರಯ ತಾಣವಾಗಿರುವ ಈ ಅರಣ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel