ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. ಅಲ್ಲದೇ, 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಲವು ಕೈಗಾರಿಕೆಗಳು ಸಹ ತುಮಕೂರಿಗೆ ಬರುತ್ತಿವೆ. ಹೀಗಾಗಿ ಇವೆಲ್ಲಾವನ್ನು ಗಮನದಲ್ಲಿಟ್ಟುಕೊಂಡು, ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂದರು. ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ತುಮಕೂರಿನವರೆಗೂ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement