ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರನ್ನು ಬಿಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಂಗಭದ್ರ ಅಣೆಕಟ್ಟು 19ನೇ ಗೇಟ್ ಮುರಿದರೂ ಐದೇ ದಿನದಲ್ಲಿ ದುರಸ್ಥಿ ಮಾಡಿ ನೀರನ್ನು ಮತ್ತೆ ಸಂಗ್ರಹಿಸಿದೆ. ಇದರಿಂದಾಗಿ ಬೇಸಿಗೆ ಬೆಳೆಗೆ ನೀರು ಪೂರೈಕೆಯಾಗಲಿದೆ ಎಂದರು. ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಈಗ ಹಣವನ್ನು ಮಂಜೂರು ಮಾಡಿಲ್ಲ. ಆದರೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷವಾಗಿ 5000 ಕೋಟಿ ರೂಪಾಯಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel