ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯ ಮತ್ತೆ ತುಂಬುವ ನಿರೀಕ್ಷೆ | ರೈತರಿಗೆ ತೊಂದರೆಯಾಗದಂತೆ ಕ್ರಮ – ಸಿಎಂ ಸಿದ್ದರಾಮಯ್ಯ

August 14, 2024
9:19 AM

ಹವಾಮಾನ ಮುನ್ಸೂಚನೆಯಂತೆ(IMD) ಮತ್ತೆ ಉತ್ತಮ ಮಳೆಯಾಗಲಿದೆ. ತುಂಗಭದ್ರಾ ಜಲಾಶಯದಿಂದ(Tunga Bhadra Dam) ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(C M Siddaramayya) ತಿಳಿಸಿದರು. ಅವರು  ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

Advertisement

ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ.. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದರು.

ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನ: ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group