ಹವಾಮಾನ ಮುನ್ಸೂಚನೆಯಂತೆ(IMD) ಮತ್ತೆ ಉತ್ತಮ ಮಳೆಯಾಗಲಿದೆ. ತುಂಗಭದ್ರಾ ಜಲಾಶಯದಿಂದ(Tunga Bhadra Dam) ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದ್ದು, ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(C M Siddaramayya) ತಿಳಿಸಿದರು. ಅವರು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಆದರೆ ಇದು ರಾಜಕೀಯ ಮಾಡುವ ವಿಷಯವಲ್ಲ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ.. ಈ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ ಎಂದರು.
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ನ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನ: ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನ: ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ರಾಷ್ಟ್ರೀಯ ರೈತ ದಿನಾಚರಣೆಯನ್ನು ದಕ್ಷಿಣ ಕನ್ನಡದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ಕೃಷಿ ಸಚಿವ ಎನ್.…
ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್…
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವ…
ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ…
ಅಡಿಕೆ ಸಂಗ್ರಹಣೆಯಲ್ಲಿ ಹುಳು, ಫಂಗಸ್ ಮತ್ತು ಗುಣಮಟ್ಟ ನಷ್ಟ ತಗ್ಗಿಸಲು ವಿಕಿರಣ ತಂತ್ರಜ್ಞಾನ…
ಕರ್ನಾಟಕದಲ್ಲಿ ಶೀತ ಅಲೆ ತೀವ್ರಗೊಂಡಿದ್ದು 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ. ಬೀದರ್‌ನಲ್ಲಿ…