ಅಂದು 500 ರೂ ಹಾಗೂ 1000ರೂ ನೋಟುಗಳ ಚಲಾವಣೆ ಹಿಂಪಡೆದಾಗ ಇಡೀ ದೇಶವೇ ಅಲ್ಲೋಲ ಕಲ್ಲೋಲವಾಗಿತ್ತು. ಆದರೆ ಕಳೆದ ಎರಡು ತಿಂಗಳ ಹಿಂದೆ 2000 ಮುಖ ಬೆಲೆಯ ನೋಡು ರದ್ದು ಮಾಡಿದಾಗ ಜನಸಾಮಾನ್ಯರು ಅಂತ ದೊಡ್ಡ ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ನೋಟನ್ನು ಬ್ಯಾಂಕ್ ಗಳಿಗೆ ಹಿಂದಿರಿಗಿಸುವ ಕೆಲಸ ಅದರಪಾಡಿಗೆ ನಡೆದಿದೆ. ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ತನ್ನ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ನಿರ್ಧಾರವನ್ನು ಮೇ 19ರಂದು ಘೋಷಿಸಿತ್ತು. 2,000 ರೂ ನೋಟುಗಳನ್ನು ಹೊಂದಿರುವವರು ಬ್ಯಾಂಕುಗಳಲ್ಲಿ ಅವುಗಳನ್ನು ವಿನಿಮಯ ಮಾಡಿಕೊಳ್ಳಲು ತಿಳಿಸಲಾಗಿದೆ. ಜುಲೈ ತಿಂಗಳ ಅಂತ್ಯದೊಳಗೆ ಶೇ. 88ರಷ್ಟು ಪ್ರಮಾಣದಲ್ಲಿ ನೋಟುಗಳು ಮರಳಿವೆ ಎಂದು ಆರ್ಬಿಐ ಮಾಹಿತಿ ನೀಡಿದೆ. ಅಂದರೆ ಇನ್ನೂ ಶೇ. 10ಕ್ಕಿಂತ ಹೆಚ್ಚು ನೋಟುಗಳು ಬ್ಯಾಂಕುಗಳಿಗೆ ಮರಳಿಲ್ಲದಿರುವುದು ಈ ಅಂಕಿ ಅಂಶದಿಂದ ಕಂಡುಬರುತ್ತದೆ. ಬಹಳ ಮಂದಿ ಬಳಿ 2,000 ರೂ ನೋಟುಗಳ ಸಂಗ್ರಹ ಇನ್ನೂ ಇರಬಹುದು.
ಸೆಪ್ಟೆಂಬರ್ 30ರವರೆಗೂ ಈ ನೋಟುಗಳನ್ನು ಬ್ಯಾಂಕುಗಳಲ್ಲಿ ವಿನಿಮಯ ಮಾಡಿಕೊಳ್ಳಲು ಅವಕಾಶ ಕೊಡಲಾಗಿದೆ. ಅದಾದ ಬಳಿಕ ನೋಟು ಅಸಿಂಧುಗೊಳ್ಳುವುದಿಲ್ಲ ಎಂದು ಆರ್ಬಿಐ ಹೇಳಿದೆಯಾದರೂ, ಆ ನೋಟು ನಿರುಪಯುಕ್ತವಾಗುತ್ತದಾ ಎಂಬುದು ಸ್ಪಷ್ಟಗೊಂಡಿಲ್ಲ. ಸೆಪ್ಟಂಬರ್ 30 ರ ಬಳಿಕ ಆರ್ಬಿಐ ಈ ಬಗ್ಗೆ ಸ್ಪಷ್ಟನೆ ನೀಡಬಹುದು. ಅದೇನೇ ಇದ್ದರೂ 2,000 ರೂ ನೋಟು ವಿನಿಮಯಕ್ಕೆ ಇನ್ನೂ ಒಂದೂವರೆ ತಿಂಗಳಿಗೂ ಹೆಚ್ಚು ಕಾಲಾವಕಾಶ ಇದೆ. ಸೆಪ್ಟಂಬರ್ 30ರವರೆಗೆ ಬ್ಯಾಂಕುಗಳಿಗೆ ಯಾವ್ಯಾವಾಗ ರಜಾ ದಿನಗಳೆಂದು ತಿಳಿಯುವುದು ಈ ಸಂದರ್ಭದಲ್ಲಿ ಉಚಿತವೆನಿಸಬಹುದು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490