ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯದ ನಿರುದ್ಯೋಗಿ ಯುವಕ ಯುವತಿಯರಿಗೆ ರಾಜ್ಯಾದ್ಯಂತ 28 ಸಾವಿರ ದ್ವಿಚಕ್ರ ವಾಹನಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ನಿರುದ್ಯೋಗಿ ಯುವಕ ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಈ ಸಂಬಂಧ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಯೋಜನೆ ಅನುಷ್ಠಾನಕ್ಕಾಗಿ ಸರ್ಕಾರ 210 ಕೋಟಿ ವೆಚ್ಚ ಮಾಡುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು.

ಮಿರರ್ ಡೆಸ್ಕ್ – ಮಿರರ್ ನ್ಯೂಸ್ ನೆಟ್ವರ್ಕ್
Be the first to comment on "SC/ST ನಿರುದ್ಯೋಗಿ ಯುವಕ ಯುವತಿಯರಿಗೆ ದ್ವಿಚಕ್ರ ವಾಹನ ವಿತರಣೆ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ |"