ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ. ಶೇಖರ್ ಹೃದಯಾಘಾತದಿಂದ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ತಕ್ಷಣವೇ ಸುಳ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು.
ಯು ಡಿ ಶೇಖರ್ ಅವರು ಗುತ್ತಿಗಾರು, ಅರಂತೋಡು, ಐವರ್ನಾಡು ಸೇರಿದಂತೆ ವಿವಿಧ ಗ್ರಾಪಂ ಗಳಲ್ಲಿ ಕೆಲಸ ಮಾಡಿದ್ದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ನಲ್ಲಿ ಪಂಚಾಯತ್ ಕಾರ್ಯದರ್ಶಿ ಸದ್ಯ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ , ಪುತ್ರ ಹಾಗು ಪುತ್ರಿಯನ್ನು ಅಗಲಿದ್ದಾರೆ. ಮೃತರ ಗೌರವಾರ್ಥ ಸುಬ್ರಹ್ಮಣ್ಯದಲ್ಲಿ ವರ್ತಕರು ಒಂದು ಗಂಟೆಗಳ ಕಾಲ ಅಂಗಡಿ ಬಂದ್ ಮಾಡಿ ಗೌರವ ಸೂಚಿಸಲು ನಿರ್ಧರಿಸಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…