ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ. ನಾಳೆ ವಿವಿಧ ಕಾರ್ಯಕ್ರಮಗಳು ಹಾಗೂ ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದೆ. ಮಂಗಳವಾರ ವಿಟ್ಲಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ. ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷವಾಗಿದೆ. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ .
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement