ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮಕ್ಕೆ ಕೃಷ್ಣ ನಗರಿ ಉಡುಪಿ ಸಜ್ಜುಗೊಂಡಿದೆ. ಕೃಷ್ಣಮಠ, ಅಷ್ಟಮಠಗಳಲ್ಲಿ ಹಬ್ಬದ ತಯಾರಿ ಭರದಿಂದ ಸಾಗುತ್ತಿದೆ.ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರದಾನ ನಡೆಯಲಿದ್ದು, ವಿಟ್ಲ-ಪಿಂಡಿ ಉತ್ಸವ ಸಂಭ್ರಮದಿಂದ ನಡೆಯಲಿದೆ.ಜನ್ಮಾಷ್ಟಮಿಯ ವೇಳೆ ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ.
ಇದಕ್ಕಾಗಿ ಸಾವಿರಾರು ಚಕ್ಕುಲಿ ಉಂಡೆ ಪ್ರಸಾದ ತಯಾರಿಸಲಾಗುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರ ನಿರ್ದೇಶನದಂತೆ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ.
ಈ ಸಂದರ್ಭ ಮಾತನಾಡಿದ ಪುತ್ತಿಗೆ ಪರ್ಯಾಯದ ಸಾಂಸ್ಕೃತಿಕ ಕಾರ್ಯದರ್ಶಿ ರಮೇಶ್ ಭಟ್ , ಈ ಬಾರಿ 108 ಬಗೆಯ ಲಡ್ಡುಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು. ಬಾಣಸಿಗ ರಾಘವೇಂದ್ರ ಭಟ್, 120 ಬಾಣಸಿಗರು ಕಳೆದ 4 ದಿನಗಳಿಂದ ವಿವಿಧ ರೀತಿಯ ಉಂಡೆ ಹಾಗೂ ಚಕ್ಕುಲಿ ತಯಾರಿಯಲ್ಲಿ ತೊಡಗಿಕೊಂಡಿದ್ದಾರೆ ಎಂದು ತಿಳಿಸಿದರು.
Source: D D
ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವದಿಂದ ಕಟ್ಟಡ ನಿರ್ಮಾಣ…
ಮಳೆಯ ಕಾರಣದಿಂದ ಅಡಿಕೆಗೆ ಬಾಧಿಸಿದ ಕೊಳೆರೋಗದ ತೀವ್ರತೆ ಹಾಗೂ ನಷ್ಟದ ಬಗ್ಗೆ ಅಖಿಲ…
ಅಡಿಕೆಗೆ ಕೊಳೆರೋಗ ವ್ಯಾಪಕವಾಗುತ್ತಿದೆ. ವಾರದ ಮೊದಲು ಕೆಲವು ಕಡೆ ಮಾತ್ರವೇ ಅಡಿಕೆಗೆ ಕೊಳೆರೋಗ…
ಅರಣ್ಯ ಅಥವಾ ಕಾಡು ಎಂದರೆ ದಟ್ಟವಾದ ಮರಗಳ ಸಮೂಹ ಮಾತ್ರವಲ್ಲ, ಅರಣ್ಯ ಎಂದರೆ…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮೇಲ್ ಸ್ತರ ಹಾಗೂ ಮಧ್ಯಮ…