ಕರಾವಳಿ ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳೇ ಹೆಚ್ಚಾಗುತ್ತಿದೆ. ಭತ್ತದ ಉತ್ಪಾದನೆಗೆ ಕಡಿಮೆ ಆದ್ಯತೆ ನೀಡಲಾಗುತ್ತಿದೆ. ಭತ್ತದ ನಾಟಿಯಿಂದ ತೊಡಗಿ ಇದು ಸಂಕಷ್ಟದ ಕೃಷಿ ಎಂದು ವಾಣಿಜ್ಯ ಬೆಳೆಯತ್ತ ಬಹುತೇಕ ಕೃಷಿಕರು ಆಸಕ್ತರಾಗಿದ್ದಾರೆ. ಈ ನಡುವೆಯೇ ಈ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರಿಗೆ ಒಟ್ಟು 47,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿ ಹೊಂದಲಾಗಿದೆ.
Advertisement
ಉಡುಪಿ ಜಿಲ್ಲೆಯಲ್ಲಿ ಒಟ್ಟು 38 ಸಾವಿರ ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯಲ್ಲಿ 9,390 ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಉತ್ಪಾದನೆ ಗುರಿಯನ್ನು ಇಲಾಖೆ ಹೊಂದಿದೆ. ಬಂಟ್ವಾಳ 1,510, ಬೆಳ್ತಂಗಡಿ 1,600, ಪುತ್ತೂರು 205, ಕಡಬ 165, ಸುಳ್ಯ 210 ಉಡುಪಿ 17,650, ಕುಂದಾಪುರ 13,250 ಹಾಗೂ ಕಾರ್ಕಳದಲ್ಲಿ 7,100 ಹೆಕ್ಟೇರ್ ಹಾಗೂ ದ.ಕ. ಜಿಲ್ಲೆಯ ಮಂಗಳೂರು 1,500, ಮೂಡುಬಿದಿರೆ 1,650, ಮೂಲ್ಕಿ 1,700, ಉಳ್ಳಾಲ 850 ಹೆಕ್ಟೇರ್ ಪ್ರದೇಶಗಳಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement