Advertisement
ಮಾಹಿತಿ

88 ವಿವಿಧ ಉದ್ಯಮ ಆರಂಭಿಸಲು ಸರ್ಕಾರದ ಸಹಾಯ : 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 3 ಲಕ್ಷ ಸಾಲ

Share

ಸರ್ಕಾರ ಹಲವಾರು ರೀತಿಯ ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಲ್ಲಿ ಹೆಚ್ಚಾಗಿ ಮಹಿಳೆಯರನ್ನು ಸಬಲೀಕರಣಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಘೋಷಣೆ ಮಾಡುತ್ತೆ.  ಮಹಿಳೆಯರು ಸ್ವಂತ ಉದ್ಯೋಗ ಮಾಡಲು ಸರ್ಕಾರ ಅನೇಕರೀತಿಯ ಸಾಲವನ್ನು ನೀಡುತ್ತಿದೆ.

ಉದ್ಯೋಗಿನಿ ಯೋಜನೆಯಡಿ ಸರ್ಕಾರವು ಮಹಿಳೆಯರಿಗೆ ಹಲವಾರು ರೀತಿಯಲ್ಲಿ ಸಹಾಯ ಮಾಡುತ್ತಿದೆ. ಸಮಾಜದ ಎಲ್ಲಾ ವರ್ಗದ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ನೀಡಲು ಮುಂದಾಗಿದೆ. ಈ ಯೋಜನೆಯಲ್ಲಿ  ವಿಧವೆಯರಿಗೆ, ನಿರ್ಗತಿಕ ಮಹಿಳೆಯರಿಗೆ, ಅಂಗವಿಕಲರಿಗೆ ವಿಶೇಷ ಪ್ರಾತಿನಿದ್ಯ ನೀಡಲಾಗುತ್ತದೆ.

ಸುಮಾರು 88 ವಿವಿಧ ಉದ್ಯಮ ಆರಂಭಿಸಲು ಉದ್ಯೋಗಿನಿ ಯೋಜನೆಯಡಿ ಸಾಲ ನೀಡಲಾಗುತ್ತದೆ. ಹೊಲಿಗೆ, ಮತ್ಸೋದ್ಯಮ, ದಿನಸಿ ಮಾರಾಟ, ಆಗರಬತ್ತಿ ತಯಾರಿಕೆ, ಬೇಕರಿ, ಗ್ರಂಥಾಲಯ ಇಂತಹ ಉದ್ಯೋಗವನ್ನು ಮಾಡಲು ಸರ್ಕಾರವು ಮಹಿಳೆಯರಿಗೆ ಯಾವುದೇ ಬಡ್ಡಿ ಇಲ್ಲದೇ ಸಾಲ ನೀಡಲಾಗುತ್ತದೆ. ಮಹಿಳೆಯರಿಗೆ 3 ಲಕ್ಷದವರೆಗೆ ಸಾಲ ನೀಡಲಾಗುತ್ತದೆ ಅದು ಯಾವುದೇ ಬಡ್ಡಿ ಇಲ್ಲದೇ ಕೊಡಲಾಗುತ್ತದೆ.

ಈ ಎಲ್ಲಾ ಅರ್ಹತೆಗಳಿದ್ದೆ ಸಾಕು..

  • 18-50 ವರ್ಷದ ಮಹಿಳೆಯರು ಅರ್ಹರಾಗಿರುತ್ತಾರೆ.
  • ಮಹಿಳೆಯರ ಕುಟುಂಬದ ಆದಾಯ5 ಲಕ್ಷಕ್ಕಿಂತ ಕಡಿಮೆ ಇರಬೇಕು.
  • ವಿಧವೆಯರು, ಅಂಗವಿಕಲರು, ನಿರ್ಗತಿಕ ಮಹಿಳೆಯರಾಗಿದ್ದರೆ ಕುಟುಂಬದಲ್ಲಿ ಹೆಚ್ಚಿನ ಆದಾಯವಿದ್ದರೆ ಸಾಲ ನೀಡಲು ಪರಿಗಣಿಸಲಾಗುತ್ತದೆ.

ಬೇಕಾದ ದಾಖಲೆಗಳು :

  • ಆಧಾರ್‌ ಕಾರ್ಡ್‌
  • ಜನನ ಪ್ರಮಾಣ ಪತ್ರ
  • ಸ್ಥಳೀಯ ಶಾಸಕ ಅಥವಾ ಸಂಸದನ ಲೆಟರ್‌ ಹೆಡ್‌ ಇರುವ ಪ್ರಮಾಣ ಪತ್ರ
  • ಬಿಪಿಎಲ್‌ ರೇಷನ್‌ ಕಾರ್ಡ್‌ ಜೆರಾಕ್ಸ್‌
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ

ನಿಮ್ಮ ಸ್ಥಳೀಯ ಬ್ಯಾಂಕುಗಳಲ್ಲಿ ಭೇಟಿ ನೀಡುವುದರ ಮೂಲಕ ಸರ್ಕಾರ ನೀಡುತ್ತಿರುವ ಬಡ್ಡಿರಹಿತ ಸಾಲವನ್ನು ಅಂದರೆ 3 ಲಕ್ಷ ಸಾಲವನ್ನು ಕೊಡಲಾಗುತ್ತದೆ. ಅದರಲ್ಲಿ 90,000 ಸಾವಿರ ಹಣವನ್ನು ಉಚಿತವಾಗಿ ನೀಡುತ್ತಾರೆ. ಪ್ರತಿಯೊಬ್ಬ ಮಹಿಳೆಯರೂ ಇದರ ಪ್ರಯೋಜನ ಪಡೆದು, ಸ್ವಂತ ಉದ್ಯೋಗವನ್ನು ಆರಂಭಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

5 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

22 hours ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago