ಉಜಿರೆಯ ರುಡ್‍ಸೆಟ್ ಸಂಸ್ಥೆಯಲ್ಲಿ ಪಶುಮಿತ್ರ ತರಬೇತಿಗೆ ಅರ್ಜಿ ಆಹ್ವಾನ

July 5, 2022
7:22 PM

ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.

Advertisement
Advertisement

ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.

ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ  ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?
May 25, 2025
9:29 AM
by: ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ
ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |
May 25, 2025
9:07 AM
by: ದ ರೂರಲ್ ಮಿರರ್.ಕಾಂ
ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ
May 25, 2025
6:13 AM
by: The Rural Mirror ಸುದ್ದಿಜಾಲ
ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ
May 25, 2025
6:05 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group