ಸ್ವಾತಂತ್ರ್ಯ ಭಾರತದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಸಹಯೋಗದೊಂದಿಗೆ ಆಜಾದಿ ಸೆ ಅಂತ್ಯೋ ದಯ ತಕ್ ಅಭಿಯಾನದಡಿ ಕೃಷಿಕರು ಕೃಷಿ ಉದ್ಯಮಿಗಳಾಗಿ ಹೆಚ್ಚಿನ ಆದಾಯಗಳಿಸಲು ಸಹಕಾರಿಯಾಗುವಂತೆ ತರಬೇತಿ ನೀಡಲು ದೇಶದಲ್ಲಿ 75 ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡವೂ ಆಯ್ಕೆಯಾಗಿದೆ.
ತರಬೇತಿಯ ಅವಧಿ 60 ದಿನಗಳು, ಜು. 18 ರಿಂದ ಉಜಿರೆಯ ಸಿದ್ಧವನದ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಕೃಷಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವವರು, ಪಶು ಸಂಗೋಪನೆಯಲ್ಲಿ ಹೆಚ್ಚಿನ ಮಾಹಿತಿ ಪಡೆಯಲು ಆಸಕ್ತಿ ಇರುವ ಹಾಗೂ ಸ್ವ-ಉದ್ಯೋಗವನ್ನು ಮಾಡಲು ಇಚ್ಛಿಸುವ ಯುವಕ, ಯುವತಿಯರಿಗೆ ಅವಕಾಶ ಸುವರ್ಣಾವಕಾಶವಾಗಿದೆ.
ಹೈನುಗಾರಿಕೆ, ಕುರಿ, ಆಡು, ಹಂದಿ, ಕೋಳಿ ಸಾಕಾಣಿಕೆ, ಅಲ್ಲದೆ ಉತ್ತಮ ತಳಿಗಳ ಆಯ್ಕೆ, ಅವುಗಳ ಆಹಾರ ಪದ್ದತಿ, ಜೊತೆಗೆ ನುರಿತ ಪಶುವೈದ್ಯರಿಂದ ವೈದ್ಯಕೀಯ ಮಾಹಿತಿಯನ್ನು ತರಬೇತಿಯಲ್ಲಿ ನೀಡಲಾಗುತ್ತದೆ. 18 ರಿಂದ 45 ವರ್ಷಗಳ ವಯೋಮಿತಿ ಹೊಂದಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ವೆಬ್‍ಸೈಟ್ ನಲ್ಲಿ ಅಥವಾ ಅರ್ಜಿಯನ್ನು ಬರೆದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ಧವನ ಉಜಿರೆ-574240 ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ, ಈ ವಿಳಾಸಕ್ಕೆ ಕಳುಹಿಸಬಹುದು ಮತ್ತು ಮಾಹಿತಿಗೆ ದೂ.ಸಂಖ್ಯೆ:08256-236404 ಅನ್ನು ಸಂಪರ್ಕಿಸಬಹುದು ಎಂದು ರುಡ್‍ಸೆಟ್ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…