ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ ನಿರ್ವಹಿಸುವ ಮೂಲಕ ದೇಶದ ಗಮನಸೆಳೆದಿದೆ. ಸರ್ಕಾರದ ಹತ್ತು ಹಲವು ಅನೇಕ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದರ ಪರಿಣಾಮವಾಗಿ ಉಜಿರೆ ಗ್ರಾಮ ಪಂಚಾಯತ್ ರಾಜ್ಯದಲ್ಲಿಯೇ ನಂಬರ್ ವನ್ ಗ್ರಾಮ ಪಂಚಾಯತ್ ಆಗಿ ಗುರುತಿಸಿಕೊಂಡಿದೆ. ಮಹಿಳಾ ಸಬಲೀಕರಣ, ಯಶಸ್ವಿ ತ್ಯಾಜ್ಯ ನಿರ್ವಹಣೆ, ಡಿಜಿಟಲ್ ಗ್ರಂಥಾಲಯ, ಮಹಿಳೆಯರಿಗಾಗಿ ಪ್ರತ್ಯೇಕ ಕಾರ್ಯಕ್ರಮ ಹೀಗೆ ಹತ್ತು ಹಲವು ಕಾರ್ಯಕ್ರಮಗಳಿಂದಾಗಿ ಜನಮನ್ನಣೆ ಪಡೆದಿದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಯಂತೆ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ 79ನೇ ಸ್ವಾತಂತ್ರೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಪಿಡಿಒ ಹಾಗೂ ಅಧ್ಯಕ್ಷರು ಪಾಲ್ಗೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಾಗೂ ಉಜಿರೆ ಗ್ರಾಮ ಪಂಚಾಯತ್‌ನ ಸಾಧನೆಯ ಕುರಿತಂತೆ ಗ್ರಾಮಪಂಚಾಯತ್‌ನ ಅಭಿವೃದ್ಧಿ ಅಧಿಕಾರಿ ಪಿ.ಎಚ್.ಪ್ರಕಾಶ್ ಶೆಟ್ಟಿ ಹಾಗೂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಸಂತಸ ಹಂಚಿಕೊಂಡಿದ್ದಾರೆ.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…