ತಮಿಳುನಾಡಿನ 21 ವರ್ಷದ ವಿದ್ಯಾರ್ಥಿಯೋರ್ವ ರಷ್ಯಾ ಆಕ್ರಮಣದ ವಿರುದ್ಧ ಹೋರಾಡಲು ಉಕ್ರೇನ್ ಸೇನೆಯನ್ನು ಸೇರಿದ್ದಾನೆ. ಸೈನಿಕೇಶ್ ರವಿಚಂದ್ರನ್ ಎಂಬಾತ ಉಕ್ರೇನ್‌ನ ಪ್ಯಾರಾ ಮಿಲಿಟರಿ ಪಡೆ ಸೇರಿದ ಯುವಕ.
ಈತ 2018ರಲ್ಲಿ ಖಾರ್ಕಿವ್ನ ರಾಷ್ಟ್ರೀಯ ಎರೋಸ್ಪೇಸ್ ವಿಶ್ವವಿದ್ಯಾಲಯಕ್ಕೆ ವ್ಯಾಸಂಗಕ್ಕಾಗಿ ತೆರಳಿದ್ದು, ರಷ್ಯಾ ವಿರುದ್ಧ ಹೋರಾಡಲು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ವರದಿಯಾಗಿದೆ.
ಉಕ್ರೇನ್ ಮಿಲಿಟರಿ ಪಡೆ ಸೇರ್ಪಡೆಯಾಗುವುದಕ್ಕೂ ಮುಂಚಿತವಾಗಿ ಈತ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಲು ಅರ್ಜಿ ಸಲ್ಲಿಕೆ ಮಾಡಿದ್ದು, ಅದು ತಿರಸ್ಕೃತಗೊಂಡ ಬಳಿಕ ಆತ ಈ ನಿರ್ಧಾರ ಕೈಗೊಂಡಿದ್ದಾನೆ. ಉಕ್ರೇನ್-ರಷ್ಯಾ ನಡುವಿನ ಯುದ್ಧ ಆರಂಭಗೊಂಡಾಗಿನಿಂದಲೂ ಪೋಷಕರು ಆತನೊಂದಿಗೆ ಮಾತುಕತೆ ನಡೆಸಿಲ್ಲ ಎಂಬ ಮಾಹಿತಿ ವರದಿಗಳ ಮೂಲಕ ತಿಳಿದು ಬಂದಿದೆ.
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…
ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…