ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ನಡುವೆ ನೇರ ಮಾತುಕತೆಗೆ ಸೂಚಿಸಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಉಕ್ರೇನ್‌ನಲ್ಲಿನ ಪರಿಸ್ಥಿತಿ ತುಂಬಾ ಚಿಂತಾಜನಕವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗಿನ ವರ್ಚುವಲ್ ಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಉಕ್ರೇನ್‌ನ ಬುಕಾದಲ್ಲಿ ನಾಗರಿಕರ ಹತ್ಯೆಯ ಸುದ್ದಿ ವಿಶೇಷವಾಗಿ ಕಳವಳಕಾರಿಯಾಗಿದೆ ಎಂದು ಮೋದಿ ಹೇಳಿದ್ದಾರೆ.
ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ವರ್ಚುವಲ್ ಮಾತುಕತೆ ನಡೆಸಿದರು.ಉಕ್ರೇನ್ ಮೇಲಿನ ಆಕ್ರಮಣಕ್ಕಾಗಿ ರಷ್ಯಾದ ಮೇಲೆ ಆರ್ಥಿಕ ಒತ್ತಡವನ್ನು ಹೇರಲು ಅಮೆರಿಕ ಭಾರತದಿಂದ ಹೆಚ್ಚಿನ ಸಹಾಯವನ್ನು ಬಯಸುತ್ತಿರುವಾಗ ಈ ಮಾತುಕತೆ ನಡೆದಿದೆ.ಬೈಡನ್ ಮತ್ತು ಮೋದಿ ಇಬ್ಬರೂ ಉಕ್ರೇನ್‌ನಲ್ಲಿ ವಿಶೇಷವಾಗಿ ಬುಕಾದಲ್ಲಿ ಅನೇಕ ನಾಗರಿಕರನ್ನು ಕೊಲ್ಲಲ್ಪಟ್ಟ ವಿನಾಶದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…