ನಿಲ್ಲದ ಇಸ್ರೇಲ್- ಪ್ಯಾಲೆಸ್ತೀನ್‍ ಸಂಘರ್ಷ | ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ವೈಮಾನಿಕ ದಾಳಿ | 195 ಮಂದಿ ಸಾವು, 770ಕ್ಕೂ ಹೆಚ್ಚು ಜನ ಗಾಯ |

November 2, 2023
11:55 AM
ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine) ನಾಗರೀಕರು ಸಾವನ್ನಪ್ಪಿದ್ದಾರೆ.

ಇಲ್ಲಿ ಸಾಮಾನ್ಯ ನಾಗರೀಕರ ಪ್ರಾಣ, ಬದುಕು ಮುಖ್ಯ ಅಲ್ಲ. ಕೇವಲ ಉಳ್ಳವರ, ದೊಡ್ಡವರ ಪ್ರತಿಷ್ಠೆ ಮಾತ್ರ ಲೆಕ್ಕಕ್ಕೆ ಬರುತ್ತದೆ. ದೇಶದ ನಾಗರೀಕರ ಜೀವನ ಮೂರಬಟ್ಟೆ ಆದರೂ ಯುದ್ಧ ಅನ್ನುವ ಅಮಲು ಈ ಪಾಪಿಗಳಿಗೆ ಇಳಿಯೋದೆ ಇಲ್ಲ. ಇಡೀ ವಿಶ್ವವೇ ಇಸ್ರೇಲ್- ಪ್ಯಾಲೆಸ್ತೀನ್‌ ಯುದ್ಧಕ್ಕೆ ದಂಗಾಗಿದೆ.  ಹಮಾಸ್ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಜಬಾಲಿಯಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ (Israel) ನಡೆಸಿದ ವೈಮಾನಿಕ ದಾಳಿಯಿಂದ (Air Strike) ಕನಿಷ್ಠ 195 ಪ್ಯಾಲೆಸ್ತೀನ್‍ನ (Palestine) ನಾಗರೀಕರು ಸಾವನ್ನಪ್ಪಿದ್ದಾರೆ. ಇದರಲ್ಲಿ ಸುಮಾರು 770ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Advertisement
Advertisement
Advertisement
ದಾಳಿಯ ನಂತರ 120 ಮಂದಿ ಅವಶೇಷಗಳಡಿ ಸಿಲುಕಿದ್ದಾರೆ. ಈ ನಡುವೆ ಓರ್ವ ಇಸ್ರೇಲ್ ಸೈನಿಕ ಕೂಡ ಸಾವನ್ನಪ್ಪಿದ್ದಾನೆ ಎಂದು ಹಮಾಸ್ ಹೇಳಿದೆ. ಕಳೆದ ಎರಡು ದಿನಗಳ ದಾಳಿಯಲ್ಲಿ ಇಬ್ಬರು ಹಮಾಸ್ ಮಿಲಿಟರಿ ನಾಯಕರನ್ನು ಹೊಡೆದುರುಳಿಸಲಾಗಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ಅಲ್ಲದೇ ಇನ್ನೂ ಅಡಗಿರುವ ಹಮಾಸ್ ಉಗ್ರರ ವಿರುದ್ಧ ಕಾರ್ಯಾಚರಣೆ ಮುಂದುವರಿಯುತ್ತಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇಸ್ರೇಲ್, ಈಜಿಪ್ಟ್ ಮತ್ತು ಹಮಾಸ್ ನಡುವಿನ ಒಪ್ಪಂದದ ಅಡಿಯಲ್ಲಿ 500 ಜನರ ಪಟ್ಟಿಯಲ್ಲಿ ಕನಿಷ್ಠ 320 ವಿದೇಶಿ ನಾಗರಿಕರನ್ನು ಈಜಿಫ್ಟ್‌ಗೆ ಕಳುಹಿಸಲಾಗಿದೆ. ಉಳಿದ ವಿದೇಶಿ ನಾಗರಿಕರನ್ನು ಯುದ್ಧ ಪ್ರದೇಶದಿಂದ ಕಳಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಉಳಿದ ವಿದೇಶಿ ಪ್ರಜೆಗಳನ್ನು ಸುರಕ್ಷಿತವಾಗಿ ಈಜಿಫ್ಟ್‍ಗೆ ಕಳುಹಿಸಲು ಕ್ರಮಕೈಗೊಳ್ಳಲಾಗಿದೆ.

ಇದರ ನಡುವೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಅವರು ಇಸ್ರೇಲ್‍ಗೆ ಒಂದು ತಿಂಗಳಲ್ಲಿ ತಮ್ಮ ಎರಡನೇ ಭೇಟಿಗಾಗಿ ಇಂದು ತೆರಳಲಿದ್ದಾರೆ. ಅಲ್ಲಿ ಅವರು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು (Benjamin Netanyahu) ಸೇರಿದಂತೆ ಇಸ್ರೇಲಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಮಸ್ಲಿಂ ರಾಷ್ಟ್ರಗಳ ಪ್ರತಿನಿಧಿಗಳು ಭಾಗಿಯಾಗಿ ಶಾಂತಿ ಮಾತುಕತೆ ನಡೆಸುವ ಸಾಧ್ಯತೆ ಇದೆ.

Advertisement
At least 195 Palestinians have been killed in an Israeli airstrike on the Jabalia refugee camp during an operation against Hamas militants. It is reported that more than 770 people were injured. After the attack, 120 people were trapped under the rubble. Meanwhile, Hamas said an Israeli soldier was also killed. Israel claims two Hamas military leaders have been killed in strikes over the past two days. Also, the Israeli army claims that the operation against the Hamas militants who are still hiding is continuing.
- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 19.01.2025 | ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಕೃಷಿಕರೇ ಇರಲಿ ಎಚ್ಚರ |
January 19, 2025
11:01 AM
by: ಸಾಯಿಶೇಖರ್ ಕರಿಕಳ
ಸರ್ಕಾರದ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಈಶ್ವರ್ ಖಂಡ್ರೆ ಕರೆ
January 19, 2025
7:22 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror