ಜಾನಪದ ಲೋಕಕ್ಕೆ ಯುನೆಸ್ಕೋ ಮಾನ್ಯತೆ | ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳ

October 15, 2024
10:56 PM

ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ,  ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.

Advertisement

180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ,  ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ.  ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.

ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.

ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.

 

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬದರೀನಾಥ ಧಾಮ ಯಾತ್ರಾ ಆರಂಭ | ಭಾರೀ ಪ್ರಮಾಣದಲ್ಲಿ ಆಗಮಿಸಿರುವ ಭಕ್ತರು | ಸುರಕ್ಷತೆಗಾಗಿಅರೆಸೇನಾ ಪಡೆ ನಿಯೋಜನೆ
May 5, 2025
12:21 PM
by: The Rural Mirror ಸುದ್ದಿಜಾಲ
ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ಕ್ರಮ – ಅರಣ್ಯ ಸಚಿವ ಈಶ್ವರ ಖಂಡ್ರೆ
May 5, 2025
12:02 PM
by: The Rural Mirror ಸುದ್ದಿಜಾಲ
ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?
May 5, 2025
6:52 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
2025: ಲಕ್ಷ್ಮೀನಾರಾಯಣ ಯೋಗ | ಈ ರಾಶಿಗೆ ಅದೃಷ್ಟದ ಬಾಗಿಲು ಓಪನ್
May 5, 2025
6:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group