ರಾಮನಗರ ಜಿಲ್ಲೆಯ ಜಾನಪದ ಲೋಕಕ್ಕೆ, ಯುನೆಸ್ಕೋ ಮಾನ್ಯತೆ ದೊರೆತಿದ್ದು, ಕಲೆ ಮತ್ತು ಸಂಸ್ಕೃತಿಯ ರಕ್ಷಣೆಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ.
180ಕ್ಕೂ ಹೆಚ್ಚು ಕಲಾ ಪ್ರಕಾರಗಳನ್ನು ಹೊಂದಿರುವ ಜಾನಪದ ಲೋಕ, ಕರ್ನಾಟಕದ ಸಂಸ್ಕೃತಿ ಉಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಇಲ್ಲಿನ ಕಲೆ ಮತ್ತು ಪರಂಪರೆಯ ಸಂರಕ್ಷಣೆಯನ್ನು ಪರಿಗಣಿಸಿ, ವಿಶ್ವ ಮಾನ್ಯತೆ ಪಡೆದ ಯುನೆಸ್ಕೋದ ಪಾರಂಪರಿಕ ಪಟ್ಟಿಗೆ, ಜಾನಪದ ಲೋಕವನ್ನು ಸೇರ್ಪಡೆ ಮಾಡಲಾಗಿದೆ. ಅನೇಕ ಪ್ರಕಾರದ ಜಾನಪದ ಗೀತೆ, ಸಾಹಿತ್ಯ, ನಾನಾ ಪ್ರಕಾರದ ವಿಡಿಯೋ ಚಿತ್ರೀಕರಣವನ್ನು ಇಲ್ಲಿ ಪ್ರದರ್ಶಿಸಲಾಗುತ್ತದೆ. ಇಲ್ಲಿನ ಬಯಲು ರಂಗಮಂದಿರ, ತನ್ನದೇ ಆದ ವಿಶೇಷವನ್ನು ಹೊಂದಿದೆ. ಇಲ್ಲಿನ ಲೋಕಮಹಲ್ ವಸ್ತು ಸಂಗ್ರಹಾಲಯದಲ್ಲಿರುವ ಜಾನಪದ ಕಲಾವಿದರ ವೇಷಭೂಷಣಗಳು, ನೋಡುಗರ ಕಣ್ಮನ ಸೆಳೆಯುತ್ತವೆ.
ಇಲ್ಲಿರುವ ವಿವಿಧ ಕಲಾವಸ್ತುಗಳ ಪ್ರದರ್ಶನ, ಅನೇಕ ಪಳಯುಳಿಕೆಗಳನ್ನು ಪರಿಗಣಿಸಿ, ಯುನೆಸ್ಕೋ ಪಟ್ಟಿಗೆ ಸೇರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೆ.ಸತೀಶ್ ಹೇಳುತ್ತಾರೆ.
ಜಾನಪದ ಲೋಕ ವಸ್ತು ಸಂಗ್ರಹಲಾಯದ ಮುಖ್ಯಸ್ಥ ಡಾ.ರವಿ ಯು.ಎಂ, ಜಾನಪದ ಲೋಕ, ವಿಶ್ವಮಾನ್ಯತೆ ಪಡೆದ ರಾಜ್ಯದ ಎರಡನೇ ಸ್ಥಳವಾಗಿದೆ. ಯುನೆಸ್ಕೋ ಪಟ್ಟಿಯಲ್ಲಿ ಸ್ಥಾನ ಪಡೆದದ್ದು, ಸಂತಸದ ಸಂಗತಿ ಎಂದು ಸಂತಸ ಹಂಚಿಕೊಳ್ಳುತ್ತಾರೆ.
ಚಂದನ್ ಕೆ ಪಿ, 8 ನೇ ತರಗತಿ, ರೋಟರಿ ಪ್ರೌಢಶಾಲೆ, ಪಡ್ಡಂಬೈಲು |…
ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ 32ನೇ ಚಾತುರ್ಮಾಸ್ಯ ವ್ರತ ಆಷಾಢ…
ಭಾರತವು ವಾರ್ಷಿಕವಾಗಿ ಅಂದಾಜು 1.4 ಮಿಲಿಯನ್ ಟನ್ ಹಲಸಿನ ಹಣ್ಣನ್ನು ಉತ್ಪಾದಿಸುತ್ತದೆ, ಆದರೆ…
Ayanshi K.H, 1st. Std, New Horizon School Bahrain ಅಯಂಶಿ ಕೆಚ್,…
ಒಂದು ಕಡೆ ಅಡಿಕೆ ಬರ್ಮಾ ಅಡಿಕೆ ಅಕ್ರಮವಾಗಿ ಸಾಗಾಟ, ಇನ್ನೊಂದು ಕಡೆ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490