ಮುಗಿಯದ ಕಾವೇರಿ ವಿವಾದ | ಮತ್ತೆ ತಮಿಳುನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ |

November 24, 2023
11:13 AM
ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಕಾವೇರಿ ನೀರು(Cauvery water) ಹಂಚಿಕೆ ವಿಚಾರದಲ್ಲಿ ಕರ್ನಾಟಕ(Karnataka) ಹಾಗೂ ತಮಿಳುನಾಡಿಗೆ(Tamilnadu) ಇದು ಮುಗಿಯದ ವಿವಾದ ಎನ್ನಿಸುತ್ತಿದೆ. ರಾಜ್ಯದಲ್ಲಿ ಮಳೆ(Rain) ಕೊರತೆಯಿಂದ ರೈತರು(Farmer) ತಮ್ಮ ಕೃಷಿಗಳಿಗೆ(Agriculture) ನೀರಿಲ್ಲದೆ ಬಳಲುತ್ತಿದ್ದರೆ ಅತ್ತ ತಮಿಳುನಾಡು ತನ್ನ ಹಿತಾಸಕ್ತಿಗಾಗಿ ಯಾವ ಹಂತಕ್ಕೂ ಇಳಿಯಲು ಹೇಸುತ್ತಿಲ್ಲ. ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ನವೆಂಬರ್ 23ರಿಂದ ಡಿಸೆಂಬರ್ 23ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 2,700 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಸೂಚನೆ ನೀಡಿದೆ.

Advertisement
Advertisement

ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂ ಕೋರ್ಟ್‌ನ(supreme court) ಅಂತಿಮ ತೀರ್ಪು ಪಾಲಿಸುವಂತೆ ಸಮಿತಿ ಕರ್ನಾಟಕ ಸರ್ಕಾರಕ್ಕೆ(Karnataka government) ಆದೇಶಿಸಿದೆ. ನವದೆಹಲಿಯಲ್ಲಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ಸಮಿತಿಯ ಸಭೆಯಲ್ಲಿ 17 ಟಿಎಂಸಿ ನೀರು ಹರಿಸುವಂತೆ ತಮಿಳುನಾಡು ಸರ್ಕಾರ ವಾದ ಮುಂದಿಟ್ಟಿತ್ತು. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕರ್ನಾಟಕ, ನಮ್ಮಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿಯಿಂದಾಗಿ ಅಷ್ಟೊಂದು ನೀರು ಹರಿಸಲು ಸಾಧ್ಯವೇ ಇಲ್ಲ. ಮುಂದೆ ಮಳೆಯೂ ಬರುವ ಸಾಧ್ಯತೆ ಇಲ್ಲದ ಹಿನ್ನೆಲೆ 17 ಟಿಎಂಸಿ ನೀರು ಕೇಳುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದೆ.

Advertisement

ನವೆಂಬರ್‌ 3ರಂದು ನಡೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 2,600 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಇದೀಗ ಮತ್ತೆ ಒಂದು ತಿಂಗಳು ನೀರು ಹರಿಸಲು ಸೂಚಿಸಿದೆ.

– ಅಂತರ್ಜಾಲ ಮಾಹಿತಿ

Advertisement

Karnataka has once again suffered a setback in the matter of Cauvery river water. The Cauvery River Water Control Committee (CWRC) has instructed Tamil Nadu to release 2,700 cusecs of water daily from November 23 to December 23. The committee has ordered the Karnataka government to abide by the Cauvery adjudication and the final judgment of the Supreme Court.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಜೀವಕ್ಕೇ ಅಮೃತ – ಜೀವಾಮೃತ | ಜೀವಾಮೃತವು ಗಿಡ-ಮರಗಳನ್ನು ಬಿಸಿ ಮತ್ತು ಬರ, ನೀರಿನ ಕೊರತೆಯ ಸಹಿಷ್ಣುತೆ ಹೆಚ್ಚಿಸುತ್ತದೆ | |
May 1, 2024
5:44 PM
by: The Rural Mirror ಸುದ್ದಿಜಾಲ
ಮುಂದಿನ 40 ರಿಂದ 50 ಡಿಗ್ರಿ ಸೆಲ್ಸಿಯಸ್ ಶಾಖ ತರಂಗಕ್ಕೆ ಸಿದ್ಧರಾಗಿ | ಬಿಸಿಲು ಜಾಸ್ತಿ ಎಂದು ಜಗಲಿ ಕಟ್ಟೆಯಲ್ಲಿ ಕುಳಿತು ಮಾತನಾಡಿದರೆ ಪ್ರಯೋಜನವಿಲ್ಲ…! |
May 1, 2024
5:22 PM
by: The Rural Mirror ಸುದ್ದಿಜಾಲ
ಸ್ವಚ್ಛತೆ ಬಗ್ಗೆ ಒಂದು ಅನಿಸಿಕೆ | ಎಲ್ಲಾ ಯಕ್ಷಗಾನ ಮೇಳದವರಿಗೆ ಒಂದು ವಿನಂತಿ | ಚುನಾವಣೆಯ ಡ್ಯೂಟಿಯವರಿಗೂ ಸ್ವಚ್ಛತೆ ಬಗ್ಗೆ ತರಬೇತಿ ನೀಡಿ |
May 1, 2024
4:55 PM
by: The Rural Mirror ಸುದ್ದಿಜಾಲ
ಚಿನ್ನದ ದರದಲ್ಲಿ ಭಾರಿ ಇಳಿಕೆ | ಎಲ್​ಪಿಜಿ ಗ್ಯಾಸ್ ಸಿಲಿಂಡರ್​ ಬೆಲೆಯಲ್ಲೂ ಇಳಿಕೆ..!
May 1, 2024
4:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror