ಸುದ್ದಿಗಳು

#UniformCivilCode| ಏಕರೂಪ ನಾಗರಿಕ ಸಂಹಿತೆ ಎಂದರೇನು? ಯಾರಿಗೆಲ್ಲಾ ಇದು ಅನ್ವಯಿಸುತ್ತೆ..? ಏನೆಲ್ಲಾ ಬದಲಾವಣೆಯಾಗುತ್ತೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂದ್ರದ ಬಿಜೆಪಿ ಸರ್ಕಾರ ಇಡೀ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ #Uniform Civil Code ಯನ್ನು ಜಾರಿಗೆ ತರಲು ನಿರ್ಧರಿಸಿದೆ. ಹಾಗಾಗಿ ಏಕರೂಪ ನಾಗರಿಕ ಸಂಹಿತೆ ಕುರಿತು ಕೇಂದ್ರ ಸರ್ಕಾರ ಕಾನೂನು ಆಯೋಗದಿಂದ ಸಲಹೆಗಳನ್ನು ಕೋರಿತ್ತು. ಹಾಗಾದ್ರೆ ಏನು ಈ ಏಕರೂಪ ನಾಗರೀಕ ಸಂಹಿತೆ..?

ಏಕರೂಪ ನಾಗರಿಕ ಸಂಹಿತೆ ಅಥವಾ UCC ಎಂದರೇನು?: ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮವಿರುವುದು. ಏಕರೂಪ ನಾಗರಿಕ ಸಂಹಿತೆಯು ಜಾತ್ಯತೀತ ಕಾನೂನಾಗಿದ್ದು, ಅದರ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ, ಇದೀಗ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಹಿಂದೂ ಕಾನೂನು ಬುದ್ಧ, ಜೈನ ಮತ್ತು ಸಿಖ್ ಧರ್ಮಗಳ ಅನುಯಾಯಿಗಳಿಗೂ ಅನ್ವಯಿಸುತ್ತದೆ. ವಿಲ್ ಮತ್ತು ಮದುವೆಯಂತಹ ವಿಷಯಗಳಲ್ಲಿ ಈ ಕಾನೂನುಗಳನ್ನು ಪಾಲಿಸಬೇಕು.

Advertisement

ಬೇರೆ ರೀತಿಯಲ್ಲಿ ಹೇಳುವುದಾದರೆ, ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶಕ್ಕೆ ಏಕರೂಪದ ಕಾನೂನಿನ ಜೊತೆಗೆ ಮದುವೆ, ವಿಚ್ಛೇದನ, ಉತ್ತರಾಧಿಕಾರ, ದತ್ತು ಸ್ವೀಕಾರದ ನಿಯಮಗಳು ಎಲ್ಲಾ ಧಾರ್ಮಿಕ ಸಮುದಾಯಗಳಿಗೆ ಒಂದೇ ಆಗಿರುತ್ತದೆ. ಸಂವಿಧಾನದ 44ನೇ ವಿಧಿಯಲ್ಲಿ ಎಲ್ಲ ನಾಗರಿಕರಿಗೂ ಸಮಾನ ಕಾನೂನನ್ನು ಜಾರಿಗೆ ತರಲು ಹೇಳಲಾಗಿದೆ. ಆರ್ಟಿಕಲ್-44 ಅನ್ನು ಸಂವಿಧಾನದ ನಿರ್ದೇಶನ ತತ್ವಗಳಲ್ಲಿ ಸೇರಿಸಲಾಗಿದೆ. ಭಾರತದಲ್ಲಿ ಎಲ್ಲಾ ನಾಗರಿಕರಿಗೆ ಏಕರೂಪದ ‘ಕ್ರಿಮಿನಲ್ ಕೋಡ್’ ಇದೆ, ಆದರೆ ಏಕರೂಪದ ನಾಗರಿಕ ಕಾನೂನು ಇಲ್ಲ.

ಏಕರೂಪ ನಾಗರಿಕ ಸಂಹಿತೆ, UCC ಭಾರತದಲ್ಲಿ ಎಲ್ಲಾ ಕಡೆಯೂ ಅನ್ವಯಿಸುತ್ತದೆ. ಸುಪ್ರೀಂ ಕೋರ್ಟ್ ತನ್ನ ನಿರ್ಧಾರಗಳಲ್ಲಿ ಏಕರೂಪ ನಾಗರಿಕ ಸಂಹಿತೆಯ ಅನುಷ್ಠಾನಕ್ಕೆ ಹಲವು ಬಾರಿ ಒತ್ತಾಯಿಸಿದೆ. 1835 ರಲ್ಲಿ ಬ್ರಿಟಿಷ್ ಸರ್ಕಾರದ ವರದಿಯಲ್ಲಿ ಏಕರೂಪ ನಾಗರಿಕ ಸಂಹಿತೆಯ ಬಗ್ಗೆಯೂ ಪ್ರಸ್ತಾಪಿಸಲಾಗಿದೆ. ಇದರಲ್ಲಿ ಅಪರಾಧಗಳು, ಸಾಕ್ಷ್ಯಗಳು ಮತ್ತು ಒಪ್ಪಂದಗಳಂತಹ ವಿಷಯಗಳ ಬಗ್ಗೆ ಏಕರೂಪದ ಕಾನೂನು ಅನ್ವಯಿಸುವ ಅಗತ್ಯವಿದೆ ಎಂದು ಹೇಳಲಾಗಿದೆ.

ಈ ವರದಿಯಲ್ಲಿ ಹಿಂದೂ-ಮುಸ್ಲಿಮರ ಧಾರ್ಮಿಕ ಕಾನೂನುಗಳನ್ನು ತಿದ್ದುವ ಮಾತಿಲ್ಲ. ಆದಾಗ್ಯೂ, 1941 ರಲ್ಲಿ, ಹಿಂದೂ ಕಾನೂನನ್ನು ಕ್ರೋಡೀಕರಿಸಲು ಬಿಎನ್ ರಾವ್ ಸಮಿತಿಯನ್ನು ರಚಿಸಲಾಯಿತು. ರಾವ್ ಸಮಿತಿಯ ಶಿಫಾರಸಿನ ಮೇರೆಗೆ, ಹಿಂದೂಗಳು, ಬೌದ್ಧರು, ಜೈನರು ಮತ್ತು ಸಿಖ್ಖರ ಉತ್ತರಾಧಿಕಾರದ ವಿಷಯಗಳನ್ನು ಇತ್ಯರ್ಥಗೊಳಿಸಲು 1956 ರಲ್ಲಿ ಹಿಂದೂ ಉತ್ತರಾಧಿಕಾರ ಕಾಯ್ದೆ ಮಸೂದೆಯನ್ನು ಅಂಗೀಕರಿಸಲಾಯಿತು. ಆದಾಗ್ಯೂ, ಮುಸ್ಲಿಮರು, ಕ್ರಿಶ್ಚಿಯನ್ನರು ಮತ್ತು ಪಾರ್ಸಿಗಳಿಗೆ ಪ್ರತ್ಯೇಕ ಕಾನೂನುಗಳನ್ನು ಇರಿಸಲಾಯಿತು.

ಈಗ ಏಕರೂಪ ನಾಗರಿಕ ಸಂಹಿತೆಯ ಸ್ಥಿತಿ ಹೇಗಿದೆ..?

ಭಾರತೀಯ ಗುತ್ತಿಗೆ ಕಾಯಿದೆ-1872, ಆಸ್ತಿ ವರ್ಗಾವಣೆ ಕಾಯ್ದೆ-1882 ಎಲ್ಲಾ ನಾಗರಿಕರಿಗೆ ಅನ್ವಯವಾಗುವ ಒಂದೇ ರೀತಿಯ ನಿಯಮಗಳನ್ನು ಹೊಂದಿವೆ. ಅದೇ ಸಮಯದಲ್ಲಿ, ಧಾರ್ಮಿಕ ವಿಷಯಗಳಲ್ಲಿ ಕಾನೂನುಗಳು ಎಲ್ಲರಿಗೂ ವಿಭಿನ್ನವಾಗಿವೆ. ಅವುಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಆದರೆ, ಭಾರತದಂತಹ ವೈವಿಧ್ಯಮಯ ರಾಷ್ಟ್ರದಲ್ಲಿ ಇದನ್ನು ಜಾರಿಗೆ ತರುವುದು ಅಷ್ಟು ಸುಲಭವಲ್ಲ.

ದೇಶದ ಸಂವಿಧಾನ ಪ್ರತಿಯೊಬ್ಬರಿಗೂ ಅವರವರ ಧರ್ಮದ ಪ್ರಕಾರ ಬದುಕಲು ಸಂಪೂರ್ಣ ಸ್ವಾತಂತ್ರ್ಯ ನೀಡಿದೆ. ಸಂವಿಧಾನದ 25 ನೇ ವಿಧಿಯು ತನ್ನ ಸ್ವಂತ ಧರ್ಮವನ್ನು ಆಚರಿಸಲು ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿದೆ ಎಂದು ಹೇಳುತ್ತದೆ. ಏಕರೂಪ ನಾಗರಿಕ ಸಂಹಿತೆ ಜಾರಿ ಎಂಂದಾಗ, ಧಾರ್ಮಿಕ ಸಂಘಟನೆಗಳು ಇದರ ವಿರುದ್ಧ ನಿಂತಿವೆ. ಏಕ ರೂಪ ಸಂಹಿತೆಯ ಬಗ್ಗೆ ಚರ್ಚೆ ನಡೆದಾಗಲೆಲ್ಲಾ ಇಸ್ಲಾಮಿಕ್ ಸಂಘಟನೆಗಳು ಅದರ ವಿರುದ್ಧ ಧ್ವನಿ ಎತ್ತುತ್ತವೆ. ಹಾಗಾಗಿ ಕೇಂದ್ರ ಸರ್ಕಾರಕ್ಕೆ ಇದು ಅಷ್ಟು ಸುಲಭದ ಕಾಯಕವಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

9 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

11 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

12 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ರಾಷ್ಟ್ರೀಯ ಭದ್ರತೆ | ಪ್ರಧಾನಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ | ಹಲವು ವಿಷಯಗಳ ಕುರಿತು ಚರ್ಚೆ

ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ…

22 hours ago

ರಾಜ್ಯದ 6 ಜಿಲ್ಲೆಗಳಲ್ಲಿ ಶೀಥಲೀಕರಣ ಘಟಕ ನಿರ್ಮಾಣ

ರಾಜ್ಯದ 6 ಜಿಲ್ಲೆಗಳಲ್ಲಿ ತೋಟಗಾರಿಕಾ ಬೆಳೆಗಳಿಗೆ ಅನುಕೂಲವಾಗುವಂತೆ ಶೀಥಲೀಕರಣ ಘಟಕಗಳನ್ನು ನಿರ್ಮಿಸಲಾಗುತ್ತಿದೆ ಎಂದು…

23 hours ago