ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿದ ಹೇಳಿಕೆ ವಿರುದ್ಧ ಸಚಿವ ಸುನಿಲ್ ಕುಮಾರ್ ಅಭಿಯಾನ ಆರಂಭಿಸಿದ್ದಾರೆ. #ನಾನುಸ್ವಾಭಿಮಾನಿಹಿಂದು ಎಂಬ ಟ್ಯಾಗ್ ಮೂಲಕ ಅಭಿಯಾನ ಆರಂಭಿಸಿದ್ದಾರೆ.
#ನಾನುಸ್ವಾಭಿಮಾನಿಹಿಂದು
– ನನ್ನೊಡಲೊಳಗೆ ದೇಶಭಕ್ತಿಯ ಕೆಚ್ಚಿದೆ.
– ನನ್ನ ಹೃದಯದಲ್ಲಿ ಹಿಂದು ರಾಷ್ಟ್ರ ಪ್ರೀತಿ ಇದೆ.
– ನನ್ನ ಮನಸಿನಲ್ಲಿ ಹಿಂದುತ್ವದ ಸಂಸ್ಕಾರವಿದೆ.
– ನನ್ನ ಉಸಿರಿನಲ್ಲಿ ರಾಷ್ಟ್ರ ವಿರೋಧಿಗಳ ವಿರುದ್ಧ ದ್ವೇಷವಿದೆ.
– ನನ್ನ ರಕ್ತದಲ್ಲಿ ಶಿವಾಜಿಯ ಸ್ವಾಭಿಮಾನವಿದೆ.Advertisementಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ. pic.twitter.com/F0mNrO8lkS
— Sunil Kumar Karkala (@karkalasunil) November 8, 2022
Advertisement
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು ವರ್ಷ ನಡೆದುಕೊಂಡಿದೆ. ಹಿಂದು, ಹಿಂದುತ್ವ ಹಾಗೂ ಹಿಂದು ರಾಷ್ಟ್ರೀಯ ವಿಚಾರಧಾರೆಯನ್ನು ಅವಕಾಶ ಸಿಕ್ಕಾಗಲೆಲ್ಲ ಹತ್ತಿಕ್ಕಲು ಕಾಂಗ್ರೆಸ್ ಯತ್ನಿಸುತ್ತಲೆ ಬಂದಿದೆ. ಸತೀಶ್ ಜಾರಕಿಹೊಳಿ ಈ ಪರಂಪರೆಯ ಭಾಗ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರಣಿ ಟ್ವೀಟ್‌ಗಳು ಮುಂದುವರಿದಿದೆ.