ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |

February 1, 2025
2:28 PM
ಕೇಂದ್ರ ಬಜೆಟ್‌ ಮಂಡನೆ

ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಕೃಷಿ , ಗ್ರಾಮೀಣ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವನ್ನು ಆದ್ಯತೆ ಕ್ಷೇತ್ರವಾಗಿ ಪರಿಗಣಿಸಿದೆ. ಕೃಷಿ ಬಜೆಟ್‌ ಮೊದಲು ಮಂಡಿಸುವ ಮೂಲಕ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿಯನ್ನು ಆದ್ಯತೆಯಾಗಿ ಪರಿಗಣಿಸಿದ್ದಾರೆ. ಕೃಷಿಯ ಮೂಲಕ ಬಜೆಟ್‌ ಆರಂಭಿಸಿದರು.…..ಮುಂದೆ ಓದಿ….

ಯುವಕರು, ರೈತರು, ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದರು. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್​ಎಎಫ್​ಇಇ, ಎನ್​ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ ಎಂದರು. 100 ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.

ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ವಿಕಸಿತ ಭಾರತವು ಬಡತನದಿಂದ ಮುಕ್ತ ಆಗಲಿದೆ. ಮೌಲ್ಯಯುತ ಶಿಕ್ಷಣ, ಕೈಗೆಟುಕ ದರದಲ್ಲಿ ಆರೋಗ್ಯ ಸೇವೆ ಒದಗಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror