ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಕೃಷಿ , ಗ್ರಾಮೀಣ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರವನ್ನು ಆದ್ಯತೆ ಕ್ಷೇತ್ರವಾಗಿ ಪರಿಗಣಿಸಿದೆ. ಕೃಷಿ ಬಜೆಟ್ ಮೊದಲು ಮಂಡಿಸುವ ಮೂಲಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೃಷಿಯನ್ನು ಆದ್ಯತೆಯಾಗಿ ಪರಿಗಣಿಸಿದ್ದಾರೆ. ಕೃಷಿಯ ಮೂಲಕ ಬಜೆಟ್ ಆರಂಭಿಸಿದರು.…..ಮುಂದೆ ಓದಿ….
ಯುವಕರು, ರೈತರು, ಮಧ್ಯಮ ವರ್ಗಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ವಿಕಸಿತ ಭಾರತವೇ ನಮ್ಮ ಸರ್ಕಾರದ ಮೊದಲ ಗುರಿಯಾಗಿದೆ ಎಂದರು. ರೈತರಿಗಾಗಿ ಕಿಸಾನ್ ಕಾರ್ಡ್ ಸಾಲಮಿತಿ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಅಲ್ಲದೆ ರೈತರಿಗಾಗಿ ಮೂರು ಯೂರಿಯಾ ಪ್ಲಾಂಟ್ ನಿರ್ಮಾಣ ಮಾಡಲಾಗುತ್ತದೆ. ಇನ್ನೂ ರಾಷ್ಟ್ರೀಯ ಕೃಷಿ ಮಾರುಕಟ್ಟೆ ಸಂಸ್ಥೆಗಳಾದ ಎನ್ಎಎಫ್ಇಇ, ಎನ್ಸಿಸಿಎಫ್ ಇತ್ಯಾದಿ ಸಂಸ್ಥೆಗಳೊಂದಿಗೆ ರೈತರು ಒಪ್ಪಂದ ಮಾಡಿಕೊಂಡು, ಬೇಳೆಕಾಳುಗಳನ್ನು ಮಾರಬಹುದು. ಇದರಿಂದ ರೈತರಿಗೆ ಸುಲಭ ಮಾರುಕಟ್ಟೆ ಸಿಕ್ಕಂತಾಗುತ್ತದೆ ಎಂದರು. 100 ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದ್ದು. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.
ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ವಿಕಸಿತ ಭಾರತವು ಬಡತನದಿಂದ ಮುಕ್ತ ಆಗಲಿದೆ. ಮೌಲ್ಯಯುತ ಶಿಕ್ಷಣ, ಕೈಗೆಟುಕ ದರದಲ್ಲಿ ಆರೋಗ್ಯ ಸೇವೆ ಒದಗಿಸಲಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…