ಕೇಂದ್ರ ಬಜೆಟ್‌ 2026-27 | ಕೃಷಿ–ಉದ್ಯೋಗಕ್ಕೆ ಬಜೆಟ್ ಒತ್ತು

February 1, 2026
4:12 PM
ಈ ಬಜೆಟ್‌ ಕೃಷಿ, ಕರಾವಳಿ ಅಭಿವೃದ್ಧಿ, ಆರೋಗ್ಯ ಸೇವೆಗಳು ಮತ್ತು ಉದ್ಯೋಗ ಸೃಷ್ಟಿಗೆ ಪೂರಕವಾದ ಬಜೆಟ್ ಎಂದು ಹೇಳಬಹುದು.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್‌ 2026-27ರಲ್ಲಿ ಕೃಷಿ, ಕರಾವಳಿ ಮೀನುಗಾರಿಕೆ, ಆರೋಗ್ಯ ಕ್ಷೇತ್ರ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. “ವಿಕಸಿತ ಭಾರತ” ಗುರಿಯೊಂದಿಗೆ ಗ್ರೇಡ್-2(ಟೈರ್‌ -2) ಮತ್ತು ಗ್ರೇಡ್-3(ಟೈರ್-‌3) ನಗರಗಳ ಅಭಿವೃದ್ಧಿಗೆ ಸರ್ಕಾರ ಆದ್ಯತೆ ಘೋಷಿಸಿದೆ.

Advertisement

ಸಾರ್ವಜನಿಕ ಬಂಡವಾಳ ವೆಚ್ಚವನ್ನು ₹11.2 ಲಕ್ಷ ಕೋಟಿಯಿಂದ ₹12.2 ಲಕ್ಷ ಕೋಟಿಗೆ ಹೆಚ್ಚಿಸಲಾಗಿದ್ದು, ಮೂಲಸೌಕರ್ಯ ವಿಸ್ತರಣೆ ಮತ್ತು ಕೈಗಾರಿಕಾ ಚಟುವಟಿಕೆಗಳಿಗೆ ವೇಗ ಸಿಗಲಿದೆ.

ಕರಾವಳಿ ಆರ್ಥಿಕತೆಯ ಪ್ರಮುಖ ವಲಯವಾಗಿರುವ ಮೀನುಗಾರಿಕೆ ಹಾಗೂ ಸೀಫುಡ್ ರಫ್ತುಗೆ ಬೆಂಬಲ ನೀಡಲಾಗಿದ್ದು, ಡ್ಯೂಟಿ-ಫ್ರೀ ಇನ್‌ಪುಟ್ ಮಿತಿಯನ್ನು 1%ರಿಂದ 3%ಗೆ ಹೆಚ್ಚಿಸಲಾಗಿದೆ.

ಅದೇ ವೇಳೆ ಕೃಷಿಯಲ್ಲಿ ತೆಂಗು–ಕೋಕೋ ಸೇರಿದಂತೆ ವಾಣಿಜ್ಯ ಬೆಳೆಗಳಿಗೆ ಉತ್ತೇಜನ ನೀಡುವ ಜೊತೆಗೆ MSME ಹಾಗೂ ಸಣ್ಣ ಕೈಗಾರಿಕೆಗಳಿಗೆ ‘Corporate Mitras’ ತರಬೇತಿ ಯೋಜನೆ ಜಾರಿಗೆ ತರಲಾಗಿದೆ.

ಆರೋಗ್ಯ ಕ್ಷೇತ್ರದಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಅಗತ್ಯವಿರುವ 17 ಔಷಧಗಳ ಮೇಲೆ ಕಸ್ಟಮ್ಸ್ ಡ್ಯೂಟಿ ವಿನಾಯಿತಿ ನೀಡಲಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror